ಬೆಂಗಳೂರು:“ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ನಿಯಮಾವಳಿ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ:ಲೋಕಸಭೆ ಸದಸ್ಯರಾಗಿ ಶತ್ರುಘ್ನ ಸಿನ್ಹಾ ಪ್ರಮಾಣ ವಚನ ಸ್ವೀಕಾರ!
ವಿಧಾನಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, “ಮಾಲ್​ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ಶುಕ್ರವಾರ (ಜುಲೈ 19) ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿಕೆ ನೀಡಿದ್ದರು. ನಾನು ಶುಕ್ರವಾರ ಗೈರಾಗಿದ್ದ ಕಾರಣ ಈಗ ನನ್ನ ಹೇಳಿಕೆ ನೀಡುತ್ತಿದ್ದೇನೆ” ಎಂದು ಹೇಳಿದರು.
“ಜಿಟಿ ಮಾಲ್​ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಯಿತು ಹಾಗೂ ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಈಗ ಚೆಕ್ ಮುಖಾಂತರ ಬಾಕಿ ತೆರಿಗೆ ಪಾವತಿ ಮಾಡಿದ್ದಾರೆ” ಎಂದರು.
“ಕೆಲವು ಕ್ಲಬ್ ಗಳಲ್ಲಿ ಪಂಚೆ ಹಾಕಿದ್ದರೆ, ಶೂ ಹಾಕದೆ ಇದ್ದರೆ ಒಳಗೆ ಬಿಡುವುದಿಲ್ಲ. ಇದರ ಬಗ್ಗೆಯೂ ಗಮನ ಹರಿಸಿ” ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಮನವಿ ಮಾಡಿದರು.
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾಗೆ ಸುಪ್ರೀಂನಿಂದ ಜಾಮೀನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − eleven =
Remember me
