ಬೆಂಗಳೂರು:ಗಾಂಜಾ ಗ್ಯಾಂಗ್ ಬೇಟೆಗೆ ಹೋಗಿದ್ದಾಗ ಆಂಧ್ರಪ್ರದೇಶದ ಚಿತ್ತೂರು ಬಳಿ ಇನ್ನೋವಾ ಕಾರು ಅಪಘಾತ ಸಂಭವಿಸಿ ಸಬ್ ಇನ್​ಸ್ಪೆಕ್ಟರ್, ಕಾನ್​ಸ್ಟೇಬಲ್ ಸೇರಿ ಮೂವರು ದಾರುಣವಾಗಿ ಮೃತಪಟ್ಟ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ಸಿಬ್ಬಂದಿಗಳ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಬಂದೋ ಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖಾ ಸಂಬಂಧ ಹಾಗೂ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ಆದೇಶಿಸಲಾಗಿದೆ. ಸಿಐಡಿ ಕಚೇರಿಯಲ್ಲಿ ಇರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾತ್ರ ಅನ್ವಯಿಸುವಂತೆ ಸಿಐಡಿ ಡಿಜಿಪಿ ಆದೇಶ ಹೊರಡಿಸಿದ್ದಾರೆ.
ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿಯಲ್ಲದೆ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರು, ಸಿಎಆರ್, ಡಿಎಆರ್, ಕೆಎಸ್ಸಾರ್ಪಿ ಹಾಗೂ ಇತರೆ ಘಟಕಗಳ ಅಧಿಕಾರಿ ಮತ್ತು ಸಿಬ್ಬಂದಿಯೂ ರಾತ್ರಿ ಪ್ರಯಾಣದ ವೇಳೆ ಅಪಘಾತಗಳಾಗಿ ಮೃತಪಟ್ಟಿರುವ ಉದಾಹರಣೆಗಳಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್​ಸಿಆರ್​ಬಿ) ವರದಿ ಪ್ರಕಾರ ದೇಶದಲ್ಲಿ 2021ರಲ್ಲಿ ವಿವಿಧ ದರ್ಜೆಯ 427 ಅಧಿಕಾರಿ, ಸಿಬ್ಬಂದಿ ಮೃತಪಟ್ಟಿದ್ದಾರೆ. ಇದರಲ್ಲಿ 339 ಮಂದಿ ರಸ್ತೆ ಅಪಘಾತಗಳಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ದೇಶದಲ್ಲಿ ಒಟ್ಟಾರೆ ಕರ್ತವ್ಯದ ವೇಳೆ 1,632 ಮಂದಿ ಗಾಯಗೊಂಡಿದ್ದಾರೆ. ರಸ್ತೆ ಅಪಘಾತಗಳಲ್ಲಿ 372 ಅಧಿಕಾರಿ ಮತ್ತು ಸಿಬ್ಬಂದಿ ಗಾಯಗೊಂಡಿದ್ದಾರೆ. ಕರ್ನಾಟಕದಲ್ಲಿ ನಾಲ್ವರು ಮೃತಪಟ್ಟಿದ್ದರೆ 25 ಮಂದಿ ಗಾಯಗೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಹೀಗಾಗಿ ಪೊಲೀಸರ ಹಿತದೃಷ್ಟಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸುವ ಆದೇಶ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two × 5 =
Remember me
