ಬೆಂಗಳೂರು:ಕರೂರು ವೈಶ್ಯ ಬ್ಯಾಂಕ್​ನ ನಿವೃತ್ತ ಅಧ್ಯಕ್ಷ ಎನ್​.ಎಸ್​.ಶ್ರೀನಾಥ್​( 73) ಶುಕ್ರವಾರ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಕುಟುಂಬದವರು ಶ್ರೀನಾಥ್​ ಅವರ ದೇಹವನ್ನು ಎಂ.ಎಸ್​.ರಾಮಯ್ಯ ಆಸ್ಪತ್ರೆಗೆ ದಾನ ಮಾಡಿದ್ದಾರೆ.
1970ರಲ್ಲಿ ಕೆನರಾ ಬ್ಯಾಂಕ್​ನಲ್ಲಿ ವೃತ್ತಿ ಆರಂಭಿಸಿದ್ದ ಇವರು, 2006ರಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಕೇಂದ್ರ ಸರ್ಕಾರ,ಬ್ಯಾಂಕ್​ ಆಫ್​​​ ಬರೋಡಾಗೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಿತ್ತು. ನಂತರ, ಕರೂರು ವೈಶ್ಯ ಬ್ಯಾಂಕ್​ನ ನಿರ್ದೆಶಕ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬ್ಯಾಂಕಿಂಗ್​ ಕ್ಷೇತ್ರದಲ್ಲಿ 40 ವರ್ಷ ಅನುಭವ ಹೊಂದಿದ್ದರು.
‘ಬ್ಯಾಡ್ ಬೆಂಗಳೂರು’ ಬಿಜೆಪಿ ಮಂಗಳವಾರ ಹೋರಾಟ
ಮುಂಬೈ, ಬೆಂಗಳೂರು, ಚೆನ್ನೈ, ಕರೂರು, ಮೈಸೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಕೆಲಸ ಮಾಡಿದ್ದರು. ಮಾನವ ಸಂಪನ್ಮೂಲ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ನೈಪುಣ್ಯತೆ ಹೊಂದಿದ್ದರು. ಕೆನರಾ ಬ್ಯಾಂಕ್​ ಉದ್ಯೋಗಿಗಳ ಕನ್ನಡ ಸಂಘ ಸೇರಿ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − three =
Remember me
