ಬಾಗಲಕೋಟೆ:ಕಡ್ಡಾಯ ನಿವೃತ್ತಿ ಹೊಂದಿದ್ದ ನ್ಯಾಯಾಧೀಶರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿರುವ ಈ ಪ್ರಕರಣ ಇದೀಗ ಸ್ಥಳೀಯರು ಮಾತ್ರವಲ್ಲದೆ ರಾಜ್ಯಾದ್ಯಂತ ಗಮನ ಸೆಳೆಯಲಾರಂಭಿಸಿದೆ.
ಮಾನಪ್ಪ ತಳವಾರ (53) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ನ್ಯಾಯಾಧೀಶರು. ಇಲ್ಲಿನ ನವನಗರದ ಸೆಕ್ಟರ್​ ನಂ. 16ರಲ್ಲಿ ಈ ಪ್ರಕರಣ ನಡೆದಿದೆ. ಮನೆಯಲ್ಲಿದ್ದ ಇವರು ಸ್ವತಃ ಶೂಟ್ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ದೇಹ ನೆಲದ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಪಕ್ಕದಲ್ಲೇ ಬಂದೂಕು ಕಂಡುಬಂದಿದೆ. ಮನೆಯೊಳಗೆ ದಿನಪತ್ರಿಕೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಮೂಲತಃ ಬಾಗಲಕೋಟೆ ತಾಲೂಕಿನ ಹಿರೇಶೆಲ್ಲಿಕೇರಿ ಗ್ರಾಮದವರಾದ ಇವರು ಕಲಬುರಗಿ ಜಿಲ್ಲೆಯ ಚಿತ್ತಾಪುರ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿದ್ದರು. ಇವರಿಗೆ ಇಬ್ಬರು ಪತ್ನಿಯರು. ಇವರು ಎರಡನೇ ಪತ್ನಿಯೊಂದಿಗೆ ನವನಗರದಲ್ಲಿ ನೆಲೆಸಿದ್ದರು. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ಖಚಿತವಾಗಿ ತಿಳಿದುಬರಬೇಕಿದೆ.
ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 2 =
Remember me
