ಬೆಂಗಳೂರು:ಚಾಲಕನೊಬ್ಬ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಯೋಧರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಿಗೇಹಳ್ಳಿಯ ವಿರುಪಾಕ್ಷಾಪುರ ನಿವಾಸಿ ರವಿಶಂಕರ್ ರಾವ್ (59) ಮೃತಪಟ್ಟವರು. ಘಟನೆಯಲ್ಲಿ ಅವರ ಸ್ನೇಹಿತರಾದ ಮಂಜುನಾಥ್, ನವೀನ್ ಹಾಗೂ ಹೋಟೆಲ್ ಸಿಬ್ಬಂದಿ ರಾಘವೇಂದ್ರ ಸೇರಿ ನಾಲ್ವರಿಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿವೃತ್ತ ಯೋಧರಾಗಿರುವ ರವಿಶಂಕರ್‌ ರಾವ್, ಖಾಸಗಿ ಸೆಕ್ಯೂರಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ 11.45ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮಂಜುನಾಥ್, ನವೀನ್ ಜತೆ ಮನೆಗೆ ಹೋಗುತ್ತಿದ್ದರು. ಈ ವೇಳೆ ಕೊಡಿಗೇಹಳ್ಳಿ ಮುಖ್ಯರಸ್ತೆಯಲ್ಲಿ ಊಟ ಪಾರ್ಸೆಲ್ ತೆಗೆದುಕೊಂಡು ಹೋಗಲು ಪಾದಚಾರಿ ಮಾರ್ಗದಲ್ಲಿ ನಿಂತಿದ್ದರು.
ಈ ವೇಳೆ ಕೊಡಿಗೇಹಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ಚಾಲಕ ಏಕಾಏಕಿ ಪಾದಚಾರಿ ಮಾರ್ಗದ ಮೇಲೆ ಕಾರು ಹತ್ತಿಸಿ, ರವಿಶಂಕರ್ ರಾವ್ ಸೇರಿ ನಾಲ್ವರಿಗೆ ಡಿಕ್ಕಿ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರವಿಶಂಕರ್ ರಾವ್ ಮೃತಪಟ್ಟಿದ್ದಾರೆ. ಇತರರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿ ಕಾರು ಚಾಲಕ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಚೀತರಿಕೆ ಬಳಿಕ ಆರೋಪಿಯನ್ನು ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಬ್ಬಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ ಇಡೀ ಆಟ ಬೇಕೇ?; ಕಾಲಮಿತಿ ಯಕ್ಷಗಾನ ಸಾಕೇ?

‘ಕಾಂತಾರ’ ಮತ್ತೊಂದು ದಾಖಲೆ; ಉತ್ತರಭಾರತದಲ್ಲಿ ಈ ಸಾಧನೆ ಮಾಡಿದ ಮೊದಲ ಕನ್ನಡ ಚಿತ್ರ!

ಫ್ರಿಡ್ಜ್​ ಒಳಗೆ ಕುಕ್ಕರ್​; ಶುರುವಾಯ್ತು ‘ಬಿಸಿಬಿಸಿ’ ಚರ್ಚೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + eight =
Remember me
