ಮಂಡ್ಯ: ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿಯಿಂದಾಗಿ ಭಾನುವಾರ ಸಂಭವಿಸಿದ ಅಫಘಾತದಲ್ಲಿ ನಿವೃತ್ತ ಯೋಧ ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ.
ಮಂಡ್ಯ ತಾಲೂಕಿನ ಸಾತನೂರು ಗ್ರಾಮದ ಬೀರೇಶ್ವರ ಬಡಾವಣೆಯ ನರಸಯ್ಯ ಅವರ ಮಗ ಕುಮಾರ್​(34) ಮೃತರು. ಭಾರತೀಯ ಸೇನೆಯಲ್ಲಿ ನಿವೃತ್ತರಾದ ನಂತರ ಊರಿಗೆ ಆಗಮಿಸಿದ್ದ ಕುಮಾರ್​ಗೆ ಗ್ರಾಮಸ್ಥರು ಅದ್ದೂರಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದರು. ಪೊಲೀಸ್​ ಇಲಾಖೆಗೆ ಕೆಲಸವೂ ಸಿಕ್ಕಿತ್ತು. ಬೆಂಗಳೂರಿನಲ್ಲಿ ಪೊಲೀಸ್​ ಕಾನ್​ಸ್ಟೆಬಲ್​ ತರಬೇತಿಯನ್ನೂ ಪಡೆಯುತ್ತಿದ್ದ ಕುಮಾರ್​, ರಜೆ ಮೇರೆಗೆ ಗ್ರಾಮಕ್ಕೆ ಬಂದಿದ್ದರು.
ಭಾನುವಾರ ಮಧ್ಯಾಹ್ನ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್​ನಲ್ಲಿ ಬರುತ್ತಿದ್ದ ವೇಳೆ ಕಾರಿಮನೆ ಗೇಟ್​ ಬಳಿ ಬೈಕ್​ ಸವಾರನೊಬ್ಬ ದೊಡ್ಡ ಗುಂಡಿಗೆ ಬೀಳುವುದನ್ನು ತಪ್ಪಿಸಲು ತನ್ನ ಬೈಕನ್ನು ಎಡಕ್ಕೆ ತಿರುಗಿಸಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಕುಮಾರ್​ ಅವರ ಬೈಕ್​ ಮುಂದೆ ಹೋಗುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದು, ಕುಮಾರ್​ ಕೆಳಕ್ಕೆ ಬಿದ್ದಿದ್ದಾರೆ.
ಈ ವೇಳೆ ತೆಂಗಿನಕಾಯಿ ಮಟ್ಟೆ ತುಂಬಿಕೊಂಡು ಮಂಡ್ಯ ಕಡೆಗೆ ಬರುತ್ತಿದ್ದ ಲಾರಿ, ಕುಮಾರ್​ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದರು. ಕುಮಾರ್​ ಅವರ ತಂದೆ ನರಸಯ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಚಾರ ಠಾಣೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.
ರಾತ್ರೋರಾತ್ರಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

ಟ್ರೋಲಿಗರನ್ನ ಕೆಣಕುತ್ತಲೇ ಹೊಸ ವಿಷಯ ಘೋಷಣೆ ಮಾಡಿದ ಡ್ರೋನ್​ ಪ್ರತಾಪ್​! ಅಷ್ಟೇ ಅಲ್ಲ, ಆಸಕ್ತರಿಗೆ ಸಂಪರ್ಕಿಸಲೂ ಕರೆ ನೀಡಿದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
