ಕೋಲಾರ:ವೀರಯೋಧನಾಗಿ 17 ವರ್ಷ ಭಾರತಾಂಬೆ ಸೇವೆ ಮಾಡಿ ಸಾಕಷ್ಟು ಕನಸುಗಳನ್ನ ಹೊತ್ತು ಸ್ವಗ್ರಾಮಕ್ಕೆ ಮರಳಿದ್ದ ನಿವೃತ್ತ ಯೋಧ ತನ್ನ ಮಡದಿಯ ಮಡಿಲಲ್ಲಿ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದ್ದು, ಜಿಲ್ಲೆಯ ಜನತೆ ಕಂಬನಿ ಮಿಡಿದಿದ್ದಾರೆ.
38 ವರ್ಷದ ಮಂಜುನಾಥ ಅವರು ಜ.31ರಂದು ಸೇನೆಯಿಂದ ನಿವೃತ್ತಿ ಪಡೆದು ಕೋಲಾರಕ್ಕೆ ಆಗಮಿಸಿದ್ದರು. 17 ವರ್ಷ ವರ್ಷ ಕುಟುಂಬದಿಂದ ದೂರವಿದ್ದ ಅವರು, ತಂದೆ-ತಾಯಿ, ಪತ್ನಿ ಹಾಗೂ ಮಕ್ಕಳೊಂದಿಗೆ ಜೀವನ ನಡೆಸಲು ನೂರಾರು ಕನಸುಗಳನ್ನ ಹೊತ್ತು ಬಂದಿದ್ದರು. ಆದರೆ, ವಿಧಿಯಾಟವೇ ಬೇರೆ ಇತ್ತು.ಇದನ್ನೂ ಓದಿರಿಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?
ನಿವೃತ್ತಿ ಬಳಿಕ ಅಂದರೆ ಫೆ.1ರಂದು ಸ್ವಗ್ರಾಮಕ್ಕೆ ಬಂದಿದ್ದ ಮಂಜುನಾಥಗೆ ಮರುದಿನವೇ ಹೃದಯಾಘಾತವಾಗಿದ್ದು, ಪತ್ನಿಯ ಮಡಿಲಲ್ಲೇ ಕೊನೆಯುಸಿರೆಳೆದರು. ಸ್ವಗ್ರಾಮ ಬಂಗಾರಪೇಟೆ ತಾಲೂಕಿನ ಕೋಡಗುರ್ಕಿ ಗ್ರಾಮದಲ್ಲಿ ಬುಧವಾರ ಅಂತ್ಯಸಂಸ್ಕಾರ ನೆರವೇರಿತು.
ಮೃತರಿಗೆ ತಂದೆ ನಾರಾಯಣಸ್ವಾಮಿ, ತಾಯಿ ರತ್ನಮ್ಮ, ಪತ್ನಿ ಅಶ್ವಿನಿ, ಇಬ್ಬರು ಮಕ್ಕಳಿದ್ದಾರೆ. ಕುಟುಂಬಸ್ಥರು ಮತ್ತು ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿತ್ತು. ನಿವೃತ್ತ ಯೋಧರು, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ತಹಸೀಲ್ದಾರ್ ದಯಾನಂದ ಅವರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.
ನನ್ನ ಗಂಡನ ಬರುವಿಕೆಗಾಗಿ ಕಾಯುತ್ತಿದೆ. ಮಕ್ಕಳು ಕೂಡ ಅಪ್ಪನಿಗಾಗಿ ದಿನಗಳನ್ನ ಎಣಿಸುತ್ತಿದ್ದರು. ಅಂತಿಮವಾಗಿ ನಮ್ಮೊಟ್ಟಿಗೆ ಇರಲು ಬಂದ ಅವರು ನನ್ನ ಮಡಿಲಲ್ಲೇ ಪ್ರಾಣ ಬಿಟ್ಟರು ಎನ್ನುತ್ತಾ ಪತ್ನಿ ಅಶ್ವಿನಿ ಕಣ್ಣೀರು ಹಾಕುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಸಾಕು ನಾಯಿಗೆ ಸೀಮಂತ! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಈ ದೃಶ್ಯ

ಟಾಯ್ಲೆಟ್​ನಲ್ಲಿ ಚಿರತೆ-ನಾಯಿ ಲಾಕ್: ನಾಯಿ ಎದುರಿಗಿದ್ರೂ ಚಿರತೆ ಫುಲ್ ಸೈಲೆಂಟ್‌! ಮುಂದೇನಾಯ್ತು?

ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 4 =
Remember me
