ಬೆಂಗಳೂರು:ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್(MB Patil)ಅವರು ಕರ್ನಾಟಕದ ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ ಅಧಿಕಾರಿಗಳೊಂದಿಗೆ ಮಂಗಳವಾರ ಪರಿಶೀಲನಾ ಸಭೆ ನಡೆಸಿದ್ದು, ಬೆಂಗಳೂರು ಮತ್ತು ಬೆಂಗಳೂರಿನ(Bengaluru)ಉಪನಗರ ರೈಲು ಯೋಜನೆಯನ್ನು ನೆರೆಯ ಪಟ್ಟಣಗಳಿಗೆ ವಿಸ್ತರಿಸಲು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಫ್ರೀ ವಿದ್ಯುತ್ ಬಗ್ಗೆ ನಿಮ್ಮಲ್ಲಿ ಇನ್ನೂ ಗೊಂದಲ ಇದೆಯೇ? ಅದಕ್ಕೆ ಉತ್ತರ ಇಲ್ಲಿದೆ ನೋಡಿ!
ಬೆಂಗಳೂರು ನಗರದ ಸುತ್ತಮುತ್ತಲಿನ ಪಟ್ಟಣಗಳಿಂದ ರಾಜಧಾನಿಗೆ ಸಂಪರ್ಕವನ್ನು ಸುಲಭಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇಲಾಖೆ ಪ್ರಕಾರ, ಉಪನಗರ ರೈಲು ಯೋಜನೆಯನ್ನು ಈಗ ಮೈಸೂರು(Mysuru),ಗೌರಿಬಿದನೂರು – ಹಿಂದೂಪುರ ಮತ್ತು ಕೋಲಾರ ಪ್ರದೇಶಗಳಿಗೆ ವಿಸ್ತರಿಸಲಾಗುವುದು ಮತ್ತು ಈ ಯೋಜನೆಯನ್ನು ಪರಿಷ್ಕರಿಸಲು ಸಚಿವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಇದನ್ನೂ ಓದಿ:ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನ: 2,164 ವಿದ್ಯಾರ್ಥಿಗಳು ಅನುತ್ತೀರ್ಣ
ಈ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಅವರು ಟ್ವೀಟ್(Tweet)ಮಾಡಿ ತಿಳಿಸಿದ್ದು, “ಬೆಂಗಳೂರು ಉಪನಗರ ರೈಲು ಯೋಜನೆಗೆ (ಬಿಎಸ್‌ಆರ್‌ಪಿ) ಪರಿಶೀಲನಾ ಸಭೆ ನಡೆಸಿದ್ದೇನೆ ಮತ್ತು ಅದರ ತ್ವರಿತ ಅನುಷ್ಠಾನಕ್ಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ಈ ಯೋಜನೆಯು ಹೊರವಲಯ ಮತ್ತು ಉಪನಗರ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹೆಚ್ಚು ಸಹಾಯವಾಗುತ್ತದೆ. ದೈನಂದಿನ ಸಂಚಾರ ದಟ್ಟಣೆ ಸಮಸ್ಯೆಗಳನ್ನು ಸಹ ಪರಿಹರಿಸುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:VIDEO| ಹಾಲು ತರಲು ಹೋದ ವಕೀಲೆಯನ್ನು ಗುಂಡಿಕ್ಕಿ ಹತ್ಯೆ!
“ಬಹುನಿರೀಕ್ಷಿತ ಉಪನಗರ ರೈಲು ಯೋಜನೆಯು ಕರ್ನಾಟಕದ ರಾಜಧಾನಿಯಲ್ಲಿ ಕಾಡುತ್ತಿರುವ ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಬೆಂಗಳೂರು ಉಪನಗರ ರೈಲು ಅಪಾರ ಸಾಮರ್ಥ್ಯದ ಯೋಜನೆಯಾಗಿದೆ” ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಆಮ್ಲೆಟ್, ಜ್ಯೂಸ್ ಆರ್ಡರ್ ಮಾಡಿ ಬಿಲ್ ಕೊಡದ ಸಬ್-ಇನ್‌ಸ್ಪೆಕ್ಟರ್, 3 ಮಹಿಳಾ ಕಾನ್‌ಸ್ಟೆಬಲ್‌ಗಳು ಅಮಾನತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
