ಬೆಂಗಳೂರು:ಎರಡನೇ ಹಂತದ ಲಾಕ್​​ಡೌನ್​ ಅವಧಿ ಮೇ 3ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ನಿನ್ನೆ ಪ್ರಧಾನಮಂತ್ರಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿ, ಆಯಾ ರಾಜ್ಯಗಳಲ್ಲಿನ ಕೊವಿಡ್​ ಪರಿಸ್ಥಿತಿಯನ್ನು ಪರಾಮರ್ಶಿಸಿದ್ದಾರೆ.
ಪ್ರಧಾನಮಂತ್ರಿ ಮೋದಿಯವರೊಂದಿಗೆ ಸಭೆ ನಡೆದ ಬೆನ್ನಲ್ಲೇ ರಾಜ್ಯ ಸರ್ಕಾರ ಲಾಕ್​ಡೌನ್​ಗೆ ಸಂಬಂಧಪಟ್ಟಂತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಲಾಕ್​ಡೌನ್​ನಲ್ಲಿ ಈಗಾಗಲೇ ಸ್ವಲ್ಪ ಪ್ರಮಾಣದಲ್ಲಿ ಸಡಿಲಿಕೆ ಮಾಡಲಾಗಿದೆ.
ಅದಕ್ಕೆ ಹೊರತಾಗಿ ಕೆಲವು ಬದಲಾವಣೆಗಳೊಂದಿಗೆ ರಾಜ್ಯಸರ್ಕಾರ ಹೊಸ ಮಾರ್ಗಸೂಚಿಯನ್ನು ನೀಡಿದ್ದು, ಮುಂದಿನ ಆದೇಶದವರೆಗೆ ಇದು ಅನ್ವಯ ಆಗಲಿದೆ.
ಬೆಂಗಳೂರು ನಗರ, ಬೆಳಗಾವಿ, ಮೈಸೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್​, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಾಕ್​ಡೌನ್​ನಲ್ಲಿ ಇನ್ನೇನೂ ಸಡಿಲಿಕೆ ಇಲ್ಲ. ಈಗಿರುವಂತೆ ಕಟ್ಟುನಿಟ್ಟಾಗಿ, ಯಥಾ ಸ್ಥಿತಿಯಲ್ಲಿಯೇ ಮುಂದುವರಿಯಲಿದೆ.
ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಲಾಕ್​ಡೌನ್​ನಲ್ಲಿ ಹೆಚ್ಚಿನ ಸಡಿಲಿಕೆ ಮಾಡಿದ್ದು ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.
ಈ ಮೇಲಿನ ಜಿಲ್ಲೆಗಳಲ್ಲಿ ರಾಮನಗರ ಹೊರತು ಪಡಿಸಿ ಉಳಿದ ಎಲ್ಲ ಕಡೆ ಹಳ್ಳಿ ಪ್ರದೇಶಗಳಲ್ಲಿ ಇರುವ ಉತ್ಪಾದನಾ ಮತ್ತು ಕೈಗಾರಿಕಾ ಉದ್ಯಮಗಳನ್ನು ಪ್ರಾರಂಭಿಸಬಹುದು. ಶೇ.50ರಷ್ಟು ಕಾರ್ಮಿಕರು ಆಗಮಿಸಬೇಕು. ರಫ್ತು ಆಧಾರಿತ ಘಟಕಗಳು, ವಿಶೇಷ ಆರ್ಥಿಕ ವಲಯಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು. ಆದರೆ ಕೆಲಸಗಾರರ ಸಂಖ್ಯೆ ನಿಗದಿಪಡಿಸಬೇಕು. ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೇ ವಾಸವಾಗಲು ವ್ಯವಸ್ಥೆ ಮಾಡಬೇಕು. ಹಾಗಾಗದಿದ್ದಲ್ಲಿ ಸಾರಿಗೆ ವ್ಯವಸ್ಥೆ ಮಾಡಬೇಕು. ಒಟ್ಟಿನಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೆಲಸ ಮಾಡಿಸಬೇಕು.  ಹಾಗೇ ಉದ್ಯೋಗಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.
ಬಳ್ಳಾರಿ, ಮಂಡ್ಯ, ಬೆಂಗಳೂರು ರೂರಲ್​, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಧಾರವಾಡಗಳು ಸದ್ಯ ಗ್ರೀನ್​ ಝೋನ್​ನಲ್ಲಿ ಇವೆ. ಅಲ್ಲಿ ಎಲ್ಲ ಅಂಗಡಿಗಳನ್ನು ತೆರೆಯುವುದು, ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭ ಮಾಡುವುದು ಆಯಾ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಟ್ಟ ವಿಚಾರವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
