ಬೆಂಗಳೂರು:ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳಾಪಟ್ಟಿ ಪರಿಷ್ಕರಿಸಿದೆ. ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆಯ ಅರ್ಜಿ ಫಾರಂ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲು ಜ,1 2024 ರವರೆಗೆ ಅವಧಿ ನಿಗದಿಪಡಿಸಿದೆ. ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿ ಪಡೆಯುವುದು ಹಾಗೂ ಡೇಟಾಬೇಸ್‌ನ್ನು ನವೀಕರಿಸುವುದು, ಪೂರಕಗಳ ಮುದ್ರಣ ಅವಧಿ ಜ.17 2024 ನಿಗದಿಪಡಿಸಲಾಗಿದೆ. ಜ.22,2024 ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಿದೆ.
ಅರ್ಹತಾ ದಿನಾಂಕ ಜ.1, 2024ಕ್ಕೆ 18 ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರು ನಮೂನೆ-6 ಅರ್ಜಿ ಸಲ್ಲಿಸಬಹುದು. ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ದಿನಾಂಕ 27.12.2023 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಚುನಾವಣಾ ಆಯೋಗವು ಸೂಚಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 4 =
Remember me
