ಬೆಂಗಳೂರು: ‘ಅನ್ನ ಹಳಸಿತ್ತು, ನಾಯಿ ಹಸಿದಿತ್ತು’ ಎಂಬ ಗಾದೆಯನ್ನು ಬಳಸಿ ಕೈ, ಕಮಲ, ಜೆಡಿಎಸ್ ನಾಯಕರು ಒಬ್ಬರಿಗೊಬ್ಬರು ಮಾತಲ್ಲೇ ತಿವಿದುಕೊಂಡಿದ್ದಾರೆ.ಸಚಿವ ದಿನೇಶ್ ಗುಂಡೂರಾವ್ ಎರಡು ಪಕ್ಷಗಳ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯು ಎರಡೂ ಪಕ್ಷದವರಿಗೂ ಅನ್ನ ಹಳಸಿತ್ತು. ನಾಯಿ ಹಸಿದಿತ್ತು ಎಂಬಂತಾಗಿದೆ ರಾಜ್ಯದಲ್ಲಿ ಬಿಜೆಪಿಗೆ ದಿಕ್ಕಿಲ್ಲದ ದೋಣಿ ಹಾಗೂ ಜೆಡಿಎಸ್ ಹಳಿಯಿಲ್ಲದ ರೈಲಿನಂತಾಗಿದೆ ಎಂದು ಕುಟುಕಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ನ ಯಾರೋ ಒಬ್ಬರು ನಾಯಕರು, ‘ನಾಯಿ ಹಸಿದಿತ್ತು, ಅನ್ನ ಹಳಸಿತ್ತು’ ಎಂದು ಹೇಳಿದ್ದಾರೆ. 2018ರಲ್ಲಿ ಅವತ್ತು ಯಾವ ಅನ್ನ ಹಳಸಿತ್ತು? ಯಾವ ನಾಯಿ ಹಸಿದಿತ್ತು ಎನ್ನುವುದನ್ನು ನೆನಪು ಮಾಡಿಕೊಳ್ಳಬೇಕು. ಅವತ್ತು ನಮ್ಮ ಮನೆಗೆ ಬಂದಿದ್ದವರು ಯಾರು? ಎಂದು ಸಚಿವ ದಿನೇಶ್ ಗುಂಡೂರಾವ್‌ಗೆ ತಿರುಗೇಟು ಕೊಟ್ಟರು.
ರಾಜ್ಯದ ಪರಿಸ್ಥಿತಿಯನ್ನು ನೋಡುತ್ತಿದ್ದೇನೆ. ಅಮಲಿನಲ್ಲಿ ನಾವು ಏನೋ ಮಾಡಿಬಿಟ್ಟಿದ್ದೇವೆ, ಜೆಡಿಎಸ್ ಪಕ್ಷವನ್ನು ಮುಗಿಸಿಬಿಟ್ಟಿದ್ದೇವೆ, ಅಲ್ಲಿಂದ ಇಲ್ಲಿಂದ ಕರೆದುಕೊಂಡು ಬರುತ್ತಿದ್ದೇವೆ ಎಂದು ಬೀಗುತ್ತಿದ್ದಾರೆ. ಅದಕ್ಕೆಲ್ಲ ಉತ್ತರ ಕೊಡುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಮಾಜಿ ಸಚಿವ ಅಶ್ವತ್ಥನಾರಾಯಣ ಪ್ರತಿಕ್ರಿಯೆ ನೀಡಿ, ಆ ಗಾದೆ ಕಾಂಗ್ರೆಸ್‌ಗೆ ಅನ್ವಯ. ಬಿಜೆಪಿ ಶಕ್ತಿಯುತವಾಗಿದೆ. ಕಾಂಗ್ರೆಸ್ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಶಿವಸೇನಾ, ಆಮ್ ಆದ್ಮಿ ಪಕ್ಷವನ್ನೂ ಕಾಂಗ್ರೆಸ್ ಬಿಡಲ್ಲ. ಕಾಂಗ್ರೆಸ್ ಎಲ್ಲಿ ಬೇಕಾದರೂ ಹೋಗಿ ಕಾಡಿ ಬೇಡಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಪರಿಸ್ಥಿತಿ ಇದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − eight =
Remember me
