ಮಂಡ್ಯ:ಮಿನಿ ಬಸ್​ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಪಲ್ಟಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದರೆ, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ಈ ಅಪಘಾತ ಸಂಭವಿಸಿದೆ.
ಮದ್ದೂರು ತಾಲೂಕಿನ ಹುಣ್ಣನದೊಡ್ಡಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಕೆಲಸ ಮುಗಿಸಿ ಹೊರಟಿದ್ದ ಸೋಮನಹಳ್ಳಿಯ ಗಾರ್ಮೆಂಟ್ಸ್ ಕಾರ್ಮಿಕರನ್ನು ಕರೆದುಕೊಂಡು ಹೊರಟಿದ್ದ ಮಿನಿ ಬಸ್​ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಅದು ಪಲ್ಟಿಯಾಗಿದೆ. ಅಲ್ಲದೆ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. 30ಕ್ಕೂ ಅಧಿಕ ಮಂದಿ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನ ಮದ್ದೂರಿನ ಭಾರತೀನಗರದ ಸರ್ಕಾರಿ ಆಸ್ಪತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮದ್ದೂರು ತಾಲೂಕಿನಲ್ಲಿ‌ ಇಂದು ಇದು ಎರಡನೇ‌ ಅವಘಡ. ಇವತ್ತು ಬೆಳಗ್ಗೆ ಮನೆಯ ಛಾವಣಿ ಕುಸಿದು ಓರ್ವ ಮಹಿಳೆ ಸಾವಿಗೀಡಾಗಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಸಂಜೆ ಬಳಿಕ ಇದೀಗ ಮತ್ತೊಂದು ಅಪಘಾತ ಸಂಭವಿಸಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಧಾನಿ ಮೋದಿಯ ಫೋಟೋ ಇಟ್ಟರೆ ನಿನ್ನನ್ನೇ ಮನೆಯಿಂದ ಹೊರಹಾಕುವೆ ಎಂದ ಮಾಲೀಕ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + 16 =
Remember me
