ಶಿವಮೊಗ್ಗ:ಈದ್​ ಮಿಲಾದ್​ ಮೆರವಣಿಗೆ ವೇಳೆ ಕಟೌಟ್​ ವಿಚಾರವಾಗಿ ಶುರುವಾದ ವಾಗ್ವಾದ ಹಿಂಸಾ ರೂಪಕ್ಕೆ ತಿರುಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಘಟನೆ ನಡೆದ ಪ್ರದೇಶದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್​ ಜಾರಿ ಮಾಡಿದ್ದಾರೆ.
ಇದನ್ನೂ ಓದಿ:ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ; ಕುಕಿ ಸಮುದಾಯದ ನಾಲ್ವರ ಬಂಧನ
ಈದ್​ ಮಿಲಾದ್​ ಅಂಗವಾಗಿ ಶಿವಮೊಗ್ಗದಲ್ಲಿ ಬೃಹತ್​ ಮಟ್ಟದಲ್ಲಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಮೆರವಣಿಗೆ ರಾಗಿಗುಡ್ಡ ತಲುಪಿದ ವೇಳೆ ಕಟೌಟ್​ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆಯಾಗಿದೆ. ಈ ವೇಳೆ ಕೆಲ ವ್ಯಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಎರಡು ಕೋಮಿನ ಯುವಕರ ಗುಂಪಿನಿಂದ ಕಲ್ಲು ತೂರಾಟ ನಡೆದ ಪರಿಣಾಮ 7ಕ್ಕೂ ಹೆಚ್ಚು ಕಾರುಗಳು ಹಾಗೂ ಮನೆಯ ಕಿಟಕಿ ಗಾಜುಗಳು ಜಖಂಗೊಂಡಿವೆ. ಕಲ್ಲು ತೂರಾಟದಿಂದ ಕೆಲವರಿಗೆ ಗಂಭೀರ ಗಾಯಗಳು ಸಹ ಆಗಿವೆ. ಘಟನೆಯಲ್ಲಿ 35ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತಷ್ಟು ಜನರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − ten =
Remember me
