ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಗೆ ಅವರಿಗೆ ಕೋಟ್ಯಂತರ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಶುಭ ಹಾರೈಸುತ್ತಿದ್ದಾರೆ. ಆದ್ರೆ ನಟ, ನಿರ್ದೇಶಕ ರಿಷಭ್​​ ಶೆಟ್ಟಿ ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಇದನ್ನು ರೀ-ಟ್ವೀಟ್ ಮಾಡಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಜೂನ್​(9)ರಂದು ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ್ದು, ಸದ್ಯ ರಿಷಭ್​​​ ಶೆಟ್ಟಿ, ‘3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮೂರನೇ ಬಾರಿಗೆ ಭಾರತದ ಪ್ರಧಾನಿ ಆಗುತ್ತಿರುವ ನಿಮಗೆ ಅಭಿನಂದನೆ. ಅಭಿವೃದ್ಧಿ, ಶಿಕ್ಷಣ ಮತ್ತು ರಾಷ್ಟ್ರೀಯ ಸುರಕ್ಷತೆಯ ಕಡೆಗೆ ನಿಮ್ಮ ಸಮರ್ಪಣೆಯನ್ನು ಗೌರವಿಸುತ್ತೇವೆ’ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮೋದಿ ಅವರನ್ನು ಹೊಗಳಿದ್ದಾರೆ.
https://x.com/shetty_rishab/status/1799705478190272540
ಕಳೆದ ವರ್ಷ 2023ರ ಏರ್ ಇಂಡಿಯಾ ಶೋಗೆ ಆಗಮಿಸಿದ್ದ ಮೋದಿ ಅವರು ನಟ ಯಶ್​, ರಿಷಬ್​ ಶೆಟ್ಟಿ, ನಿರ್ಮಾಪಕ ವಿಜಯ್​ ಕಿರಂಗದೂರು ,ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್​ ಹಾಗೂ ಡಿಜಿಟಲ್ ಕ್ರಿಯೇಟರ್​ ಶ್ರದ್ಧಾ ಜೈನ್ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತಾಡಿದ್ರು. ಮಹಾನಾಯಕ ಮೋದಿ ಅವರನ್ನು ಭೇಟಿಯಾಗಿದ್ದು ನನ್ನ ಅದೃಷ್ಟ ಎಂದು ಹಿಂದೆ ರಿಷಬ್ ಶೆಟ್ಟಿ ಹೇಳಿದ್ರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
