ಬೆಂಗಳೂರು:ನಟ ರಾಕಿಂಗ್ ಸ್ಟಾರ್ ಯಶ್ ಹೊಸಕೆರೆಹಳ್ಳಿಯ ಮತಗಟ್ಟೆ ಕೇಂದ್ರ 171ರಲ್ಲಿ ಮತದಾನ ಮಾಡಿದ್ದಾರೆ. ಯಶ್ ಮತ ಚಲಾವಣೆಗೆ ಬರುತ್ತಾರೆ, ಅವರನ್ನು ನೋಡಬೇಕೆಂದು ಮತಗಟ್ಟೆಯ ಬಳಿ ಬೆಳಗ್ಗಿನಿಂದಲೇ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಮತ ಕೇಂದ್ರದ ಬಳಿ ಯಶ್ ಬರುತ್ತಿದ್ದಂತೆ ಅಭಿಮಾನಿಗಳು ಮತ್ತಿಗೆ ಹಾಕಿದ್ದು, ನೆಚ್ಚಿನ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುತ್ತಿಗೆ ಹಾಕಿದ್ದಾರೆ.
ಹಕ್ಕು ಚಲಾವಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು. ಅದನ್ನು ಚಲಾಯಿಸುವುದು ಮುಖ್ಯವಾಗುತ್ತದೆ. ಆಸಕ್ತಿ ಇಲ್ಲದ ಕಾರಣಕ್ಕೆ ಯಾವುದೇ ಅಭ್ಯರ್ಥಿಯ ಪರ ಪ್ರಚಾರಕ್ಕೆ ಬಂದಿಲ್ಲ. ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಯಶೋಮಾರ್ಗ ಫೌಂಡೇಶನ್​ ಮೂಲಕ ಕೆಲ ಸಮಾಜಮುಖಿ ಕೆಲಸ ಮಾಡಿದ್ದೆವು. ಹೀಗಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದೆ. ರಾಜಕಾರಣಿಗಳು ಹಾಗೂ ಪಕ್ಷಗಳು ಮೂಲಭೂತ ಕೆಲಸಗಳನ್ನು ಸರಿಯಾಗಿ ಮಾಡಬೇಕು. ಆಗ ಜನರಿಗೂ ಸಹಾಯವಾಗುತ್ತದೆ ಎಂದು ಯಶ್ ಹೇಳಿದರು.
ಇದನ್ನೂ ಓದಿ:ಮತ ಚಲಾಯಿಸಲು ಬಂದ ಮಹಿಳೆಗೆ ಲಾಠಿ ಏಟು; ಪೊಲೀಸರಿಗೆ ಗ್ರಾಮಸ್ಥರಿಂದ ತರಾಟೆ
ಉಡುಪಿ: ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಈ ವೇಳೆ ನೆಚ್ಚಿನ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಂದಾಗಿದ್ದಾರೆ.
ಉಡುಪಿ: ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಆದರೆ ಪ್ರಚಾರಕ್ಕೆ ಹೋಗುವುದಿಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:ವಿಜಯಪುರ | ಮುಂಜಾಗ್ರತೆಗಾಗಿ ತರಲಾಗುತ್ತಿದ್ದ ಮಂತಯಂತ್ರಗಳನ್ನು ಒಡೆದು ಹಾಕಿದ ಗ್ರಾಮಸ್ಥರು; ಅಧಿಕಾರಿಗಳಿಗೆ ಥಳಿತ, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ
ಬೆಂಗಳೂರು: ನಟ, ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ದಂಪತಿ ಒಟ್ಟಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಮಾತನಾಡಿದ ನಿರ್ದೇಶಕ ಪ್ರೇಮ್, ದುಡ್ಡು ಪಡೆದುಕೊಂಡು ಯಾರೂ ಮತ ಹಾಕಬೇಡಿ. ಒಬ್ಬೊಬ್ಬರು ಮನೆ ಹತ್ತಿರ ವೋಟ್ ಹಾಕಿ ಎಂದು ಬರುತ್ತಾರೆ. ಇನ್ನು ಕೆಲವರು ಬಂದು ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ ಮತ ಹಾಕಿ ಎನ್ನುತ್ತಾರೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹಕ್ಕನ್ನು ಮಾರಿಕೊಳ್ಳಬೇಡಿ. ಒಳ್ಳೆಯ ವ್ಯಕ್ತಿ, ಕೆಲಸ ಮಾಡುವ ಅಭ್ಯರ್ಥಿಗೆ ಮತ ನೀಡಿ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
