ನೆಲಮಂಗಲ:ವೇಗವಾಗಿ ಬರುತ್ತಿದ್ದ ಕಾರೊಂದು ಡಿವೈಡರ್​ಗೆ ಡಿಕ್ಕಿಯಾಗಿ ರಸ್ತೆಯ ಇನ್ನೊಂದು ಬದಿಗೆ ನೆಗೆದು ಸರಣಿ ಅಪಘಾತಕ್ಕೆ ಕಾರಣವಾದ ಘಟನೆಯೊಂದು ನಡೆದಿದೆ. ತುಮಕೂರು ರಸ್ತೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ತುಮಕೂರು ಕಡೆಯಿಂದ ಬರುತ್ತಿದ್ದ ಬಲೆನೊ ಕಾರು ಡಿವೈಡರ್​​ಗೆ ಡಿಕ್ಕಿಯಾಗಿ ಇನ್ನೊಂದು ಬದಿಗೆ ನೆಗೆದು ಎದುರಿನಿಂದ ಬರುತ್ತಿದ್ದ ಎಕ್ಸ್​ಯುವಿ ಮತ್ತು ಐ10 ಕಾರಿಗೆ ಡಿಕ್ಕಿ ಹೊಡೆದಿದೆ. ತುಮಕೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನೆಲಮಂಗಲದ ಗುಂಡೇನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೊಂದು ಭಾರಿ ಅಪಘಾತವಾಗಿದ್ದರೂ ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಸ್ಥಳದಲ್ಲಿ ಬಹಳಷ್ಟು ಸಮಯ ವಾಹನದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಸೂಕ್ತಕ್ರಮ ಕೈಗೊಂಡಿದ್ದಾರೆ.
‘ದೈವ ದೇವರೆಂದರೆ ತಮಾಷೆಯಾ?’; ‘ಕಾಂತಾರ’ದ ‘ವರಾಹ ರೂಪಂ’ ಗೀತೆ ರಚಿಸಿದ ಸಾಹಿತಿ ಹೀಗಂದಿದ್ದೇಕೆ?

ಚಿತ್ರ ವಿಮರ್ಶೆ: ಹಾಡಿನ ಹಕ್ಕಿ ಸೇಡಿನ ಹಕ್ಕಿಯಾಗುವ ಕಥೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
