ಮಂಡ್ಯ: ಆಸ್ಪತ್ರೆಯಲ್ಲಿದ್ದ ಸಂಬಂಧಿಯನ್ನು ನೋಡಲು ಬಂದವರೇ ಸಾವಿಗೀಡಾದ ಪ್ರಸಂಗವೊಂದು ನಡೆದಿದೆ. ಈ ಪ್ರಕರಣದಲ್ಲಿ ತಾಯಿ ಮೃತಪಟ್ಟರೆ, ಪುತ್ರ ಹಾಗೂ ಮೊಮ್ಮಗಳು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಬೆಂಗಳೂರು ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಈ ಸಾವು-ನೋವು ಉಂಟಾಗಿದೆ. ಮಂಡ್ಯದ ಮದ್ದೂರು ಬಳಿ ಈ ಅಪಘಾತ ಸಂಭವಿಸಿದೆ. ಚನ್ನಪಟ್ಟಣ ಮೂಲದ ವರಲಕ್ಷ್ಮಿ (60) ಸಾವಿಗೀಡಾದ ಮಹಿಳೆ. ಪುತ್ರ ಸುಧಾಕರ್, ಮೊಮ್ಮಗಳು ಗೌತಮಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಹಿರಿಯ ನಾಗರಿಕರಿಗಿನ್ನು ದೇವಸ್ಥಾನದಲ್ಲಿ ನೇರ ದರ್ಶನ ವ್ಯವಸ್ಥೆ!; ಇಲ್ಲಿದೆ ವಿವರ..
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಯನ್ನು ನೋಡಲು ಬಂದಿದ್ದ ವರಲಕ್ಷ್ಮಿ, ಚನ್ನಪಟ್ಟಣಕ್ಕೆ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಈ ಮೂವರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನ ಮತ್ತು ಕ್ಯಾಂಟರ್​ ಡಿಕ್ಕಿಯಾಗಿದೆ. ಬಳಿಕ ಹೆದ್ದಾರಿ ಪಕ್ಕದ ತಡೆಗೋಡೆಗೆ ಬೈಕ್​ ಅಪ್ಪಳಿಸಿದ್ದು, ಗಂಭೀರ ಗಾಯಗೊಂಡಿದ್ದ ವರಲಕ್ಷ್ಮಿ ಸ್ಥಳದಲ್ಲೇ ಮೃತಪಟ್ಟರು. ಗಾಯಗೊಂಡ ಅವರ ಪುತ್ರ ಮತ್ತು ಮೊಮ್ಮಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರೂ ಆದ್ರೆ ನೀವೇ ಜವಾಬ್ದಾರಿ: ಎಸ್​ಪಿಗೆ ಡಿವೈಎಸ್​ಪಿ ಪತ್ರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + one =
Remember me
