ಗುತ್ತಲ (ಹಾವೇರಿ):ಸತತ ಮಳೆಯಿಂದ ತುಂಗಭದ್ರಾ ಹಾಗೂ ವರದಾ ನದಿಗಳು ತುಂಬಿ ಹರಿಯುತ್ತಿವೆ. ಗುತ್ತಲ ಹೋಬಳಿಯಲ್ಲಿ ಪ್ರವಾಹ ಉಂಟಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಜು. 15ರ ರಾತ್ರಿಯಿಂದಲೇ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಶನಿವಾರ ಸಂಜೆ ನದಿಯ ನೀರಿನ ಮಟ್ಟ ಎಂಟು ಮೀ. ತಲುಪಿದ್ದು, ಚೌಡಯ್ಯದಾನಪುರ- ಕಂಚಾರಗಟ್ಟಿ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ತುಂಗಭದ್ರಾ ನದಿಯ ಅಬ್ಬರಕ್ಕೆ ಕಂಚಾರಗಟ್ಟಿ, ನರಶೀಪುರ, ಹರಳಹಳ್ಳಿ, ಹಾವನೂರ, ಹುರಳಿಹಾಳ, ಗಳಗನಾಥ, ಗುಯಿಲಗುಂದಿ, ಮೇವುಂಡಿ ಹಾಗೂ ತೆರೆದಹಳ್ಳಿ ಗ್ರಾಮಗಳ ಸಾವಿರಾರು ಎಕರೆ ಪ್ರದೇಶ ಜಲಾವೃತಗೊಂಡಿದೆ.
ಗಳಗನಾಥ ಗ್ರಾಮದ ಬಳಿ ತುಂಗಭದ್ರಾ ನದಿಯೊಂದಿಗೆ ವರದಾ ನದಿ ಸಂಗಮವಾಗುತ್ತದೆ. ಈ ಸಂಗಮ ಸ್ಥಳದ ಹಿಂಭಾಗದಲ್ಲಿರುವ ಗಳಗನಾಥ, ಬೆಳವಿಗಿ, ನೀರಲಗಿ, ಮರೋಳ, ಹಾಲಗಿ, ಮರಡೂರ, ಅಕ್ಕೂರ, ಹೊಸರಿತ್ತಿ, ಕಿತ್ತೂರ, ಕೆಸರಳ್ಳಿ, ಕೋಣನತಂಬಿಗಿ, ಹಂದಿಗನೂರ ಗ್ರಾಮಗಳಲ್ಲಿನ ಸಾವಿರಾರು ಎಕರೆ ಪ್ರದೇಶ ಮುಳುಗಡೆ ಆಗಿದೆ.
ಬೆಳೆಗಳು ಜಲಾವೃತ:ತುಂಗಭದ್ರಾ ಹಾಗೂ ವರದಾ ನದಿಯ ಪ್ರವಾಹಕ್ಕೆ ಮೆಕ್ಕೆಜೋಳ, ಹತ್ತಿ, ಮೆಣಸಿಕಾಯಿ, ಟೊಮ್ಯಾಟೊ, ಬದನೆಕಾಯಿ, ಸೌತೆಕಾಯಿ, ರೇಷ್ಮೆ, ಶೇಂಗಾ, ಅಡಕೆ, ಪೇರಲ, ಚಿಕ್ಕು, ಕಬ್ಬು ಸೇರಿ ಅನೇಕ ಬೆಳೆಗಳು ಜಲಾವೃತವಾಗಿವೆ. ಕೃಷಿ ಮತ್ತು ತೋಟಗಾರಿಕೆ ಎರಡೂ ಬೆಳೆಗಳು ಹಾನಿಯಾಗಿದೆ.
ಪ್ರವಾಹದಲ್ಲಿ ಸಿಲುಕಿರುವ ರಾಷ್ಟ್ರ ಪಕ್ಷಿ ನವಿಲುಗಳು:ಗುತ್ತಲ ಹೋಬಳಿಯ ಅಕ್ಕೂರ ಗ್ರಾಮದಲ್ಲಿ ಅನೇಕ ನವಿಲುಗಳು ಪ್ರವಾಹದಲ್ಲಿ ಸಿಲುಕಿವೆ. ಶುಕ್ರವಾರದಿಂದ ಅವುಗಳು ಕೂಗುತ್ತಿದ್ದು, ಆಹಾರದ ಕೊರತೆ ಆಗಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಡಿಸಿಎಫ್ ಬಾಲಕೃಷ್ಣ ಅವರು ನವಿಲುಗಳಿಗೆ ಆಹಾರ ಒದಗಿಸುವ ಅಥವಾ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಹಾಲಗಿ- ಮರೋಳ ಮಧ್ಯೆಯ ವರದಾ ಸೇತುವೆ ಮೇಲೆ ಅಪಾರ ಪ್ರಮಾಣ ನೀರು ಹರಿಯುತ್ತಿದೆ. ಆದರೂ, ಅಪಾಯ ಲೆಕ್ಕಿಸದೆ ಜನರು ಸೇತುವೆ ದಾಟುವ ಹಾಗೂ ಯುವಕ- ಯುವತಿಯರು ಸೆಲ್ಫಿ ತೆಗೆದುಕೊಳ್ಳುವಲ್ಲಿ ನಿರತರಾಗಿದ್ದಾರೆ. ಮಾಹಿತಿ ಪಡೆದ ಲೋಕೋಪಯೋಗಿ ಇಲಾಖೆಯ ಎಇಇ ಶ್ರೀಮಂತ ಹದಗಲ್, ಜನತೆಗೆ ಅಪಾಯದ ಎಚ್ಚರಿಕೆ ನೀಡಿ, ಸೇತುವೆ ಸಂಚಾರ ನಿರ್ಬಂಧಿಸಿದರು.ಅನೇಕು ಇವರ ಮಾತನ್ನು ಲೆಕ್ಕಿಸದೇ ಸಂಚಾರವನ್ನು ಮುಂದೆವರಿಸಿದಾಗ ಗುತ್ತಲ ಠಾಣೆಯ ಪೊಲೀಸರಿಗೆ ದೂರವಾಣಿ ಮೂಲಕ ಪರಿಸ್ಥಿತಿ ತಿಳಿಸಿ ಸಂಚಾರ ನಿಬಂಧಿಸುವಂತೆ ವಿನಂತಿಸಿದರು.
ರಾಜ್ಯದಲ್ಲಿ ಹೆಚ್ಚಿದ ಕೋವಿಡ್ ಮೂವರ ಸಾವು, 1,374 ಮಂದಿಗೆ ಸೋಂಕು,ಸಕ್ರಿಯ ಪ್ರಕರಣಗಳ ಸಂಖ್ಯೆ 7286ಕ್ಕೆ ಏರಿಕೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 5 =
Remember me
