ಬೆಂಗಳೂರು: ನಗರದ ಸುಂಕದಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಹೊಸದಾಗಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ವಿಚಾರವಾಗಿ ಸುಂಕದಕಟ್ಟೆ ನಿವಾಸಿ ಸಿ. ಹೊನ್ನಯ್ಯ ಮತ್ತಿತರರು ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ನ್ಯಾಯಾಲಯದ ಆದೇಶದಂತೆ ಮಾ.4ರಂದು ವರದಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಪೀಠ ದೇವಸ್ಥಾನದವರು ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿರುವ ಬಗ್ಗೆ ಈಗ ಸಲ್ಲಿಸಿರುವ ವರದಿಯಲ್ಲಿ ಏನು ಹೇಳಲಾಗಿದೆ ? ಆ ಅಂಶ ವರದಿಯಲ್ಲಿ ಎಲ್ಲಿ ಉಲ್ಲೇಖಿಸಲಾಗಿದೆ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಸರ್ಕಾರಿ ವಕೀಲರಿಂದ ಸಮರ್ಪಕ ಉತ್ತರ ಬರಲಿಲ್ಲ.
ಈ ಮಧ್ಯೆ, ನ್ಯಾಯಾಲಯ ಅನುಮತಿ ಕೊಟ್ಟರೆ ಸ್ಥಳ ಪರಿಶೀಲನೆಯ ಪ್ರಕ್ರಿಯೆಯನ್ನು ಮತ್ತೊಮ್ಮೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದರು.ವರದಿ ತೃಪ್ತಿದಾಯಕವಾಗಿಲ್ಲದ ಕಾರಣ ಹೊಸದಾಗಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ನ್ಯಾಯಪೀಠ ನಿರ್ದೇಶನ ನೀಡಿತು. ಅಲ್ಲದೆ, ಸ್ಥಳ ಪರಿಶೀಲನೆಯನ್ನು ಮತ್ತೊಮ್ಮೆ ಕೈಗೊಳ್ಳಲು ಜಿಲ್ಲಾಡಳಿತ ಸ್ವತಂತ್ರವಾಗಿದ್ದು, ಅದಕ್ಕೂ ಮೊದಲು ಸಂಬಂಧಪಟ್ಟ ಎಲ್ಲರಿಗೂ ನೋಟಿಸ್ ಕೊಟ್ಟು ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಸೂಚಿಸಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
