ಕಾರವಾರ:ಹಾಳಾದ ರಸ್ತೆ ರಿಪೇರಿ ಮಾಡಿಲ್ಲ ಎಂಬ ಕಾರಣಕ್ಕೆ ಅದೇ ಜಾಗ ಮಾರಾಟಕ್ಕಿದೆ ಎಂದು ಫಲಕ ಅಳವಡಿಸಿ ಜಾಲತಾಣಗಳಲ್ಲಿ ಹರಿಬಿಟ್ಟ ಸ್ಥಳೀಯನೊಬ್ಬ ವಿಭಿನ್ನ ಪ್ರತಿಭಟನೆ ನಡೆಸಿದ್ದಾನೆ. ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಗುಂಡಬಾಳ ಬಳಿ ವರ್ಷದ ಹಿಂದೆ ಧರೆ ಕುಸಿದು ವಾಹನ ಸಂಚಾರಕ್ಕೆ ವ್ಯಾತ್ಯಯ ಉಂಟಾಗಿತ್ತು. ರಾಷ್ಟ್ರೀಯ ಹೆದ್ದಾರಿ ಇಲಾಖೆ ಕುಸಿದ ಭಾಗದಲ್ಲಿ ಒಂದು ಕಂಪೌಂಡ್ ಕಟ್ಟಿ ಬಿಟ್ಟಿದೆ. ಯಾವುದೇ ಶಾಶ್ವತ ಕಾಮಗಾರಿ ನಡೆಸಿಲ್ಲ.
ಇದರಿಂದ ಗುಂಡಬಾಳದ ರಾಜೇಶ ಶೇಟ್ ಎಂಬುವವರು ಅಲ್ಲೊಂದು ಫಲಕ ಅಳವಡಿಸಿ, ‘ಜಾಗ ಮಾರಾಟಕ್ಕಿದೆ. ವ್ಯವಸ್ಥಾಪಕರು -ಶಾಸಕರು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರ’ ಎಂದು ಬರೆದಿದ್ದಾರೆ. ಅಲ್ಲದೆ, ಅಲ್ಲಿನ ಪರಿಸ್ಥಿತಿಯನ್ನು ಫೋಟೋ ಹಾಗೂ ವಿವರಗಳನ್ನು ಫೇಸ್​ಬುಕ್​ನಲ್ಲಿ ಬರೆದಿದ್ದು, ಫೋಟೋ ಸಾಕಷ್ಟು ವೈರಲ್ ಆಗಿದೆ.
ಶಿರಸಿ -ಕುಮಟಾ ದೇವಿಮನೆ ಘಟ್ಟ ಬಂದಾದರೆ ಕರಾವಳಿಯಿಂದ ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ 206 ಪ್ರಮುಖವಾಗಲಿದೆ. ಆದರೆ, ಒಂದುವರೆ ವರ್ಷ ಕಳೆದರೂ ಶಾಶ್ವತ ಕಾಮಗಾರಿ ಕೈಗೊಳ್ಳದೆ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಜನಪ್ರತಿನಿಧಿಗಳು ಮೌನ ವಹಿಸಿದ್ದಾರೆ ಎಂದು ಅವರು ದೂರಿದ್ದಾರೆ.
ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಕೈ ಹೋರಾಟ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 4 =
Remember me
