ಬೆಂಗಳೂರು:ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಿಗೆ ರಸ್ತೆಯ ಮಧ್ಯ ಭಾಗದಿಂದ ಅಕ್ಕಪಕ್ಕಕ್ಕೆ 40 ಮೀಟರ್ ಮತ್ತು ಜಿಲ್ಲಾ ಮುಖ್ಯರಸ್ತೆಗಳಲ್ಲಿ 25 ಮೀಟರ್ ರಸ್ತೆ ಪರಿಮಿತಿ ನಿಗದಿ ಪಡಿಸುತ್ತಿರುವುದರಿಂದ ಜನ ಸಾಮಾನ್ಯರು ಎದುರಿಸುತ್ತಿರುವ ವಿಚಿತ್ರ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಯಿತು.
ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿಷಯ ಪ್ರಸ್ತಾಪಿಸಿ, ರಸ್ತೆ ಪರಿಮಿತಿಯ ಜಮೀನುಗಳಿಗೆ ಪರಿಹಾರ ಕೊಡದೆ, ಭೂ ಸ್ವಾಧೀನವನ್ನೂ ಮಾಡಿಕೊಳ್ಳದೆ ಭೂಮಿ ಮಾಲೀಕರಿಗೆ ಕಟ್ಟಡ ಕಟ್ಟಿಕೊಳ್ಳಲೂ ಅವಕಾಶ ನೀಡದಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆಂದು ವಿವರಿಸಿದರು.ಇದನ್ನೂ ಓದಿರಿವಿಡಿಯೋ ಕಾಲ್​ ರಿಸೀವ್​ ಮಾಡಿ ಹನಿಟ್ರ್ಯಾಪ್​ಗೆ ಬಿದ್ದ ಮಾಜಿ ಶಾಸಕನ ಪುತ್ರನಿಗೆ ಸಂಕಷ್ಟ!
ಇದಕ್ಕುತ್ತರಿಸಿದ ಡಿಸಿಎಂ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ, ರಸ್ತೆಗಳನ್ನು ಅಗಲೀಕರಣ ಮಾಡಬೇಕಾದ ಸಂದರ್ಭದಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿಗೆ ಹೆಚ್ಚಿನ ನಷ್ಟ ಉಂಟಾಗಬಾರದೆಂದು ಹಾಗೂ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರೆಯಾಗಬಾರದೆಂಬ ಉದ್ದೇಶದಿಂದ ನಿಗದಿಪಡಿಸಿದ ರಸ್ತೆಯ ಪರಿಮಿತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಹೆದ್ದಾರಿ ಕಾಯ್ದೆಯ ಪ್ರಕಾರ ಅನುಮತಿ ನೀಡುತ್ತಿಲ್ಲ ಎಂದರು.
ರಸ್ತೆ ಅಗಲೀಕರಣ ಅಥವಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡ ಸಂದರ್ಭದಲ್ಲಿ ಭೂ ಸ್ವಾಧೀನಪಡಿಸಿಕೊಳ್ಳಬೇಕಾದ ಅವಶ್ಯಕತೆ ಕಂಡುಬಂದಲ್ಲಿ ನಿಯಮಾನುಸಾರ ಭೂ ಸ್ವಾಧೀನ ಪ್ರಕ್ರಿಯೆ ಕೈಗೊಂಡು ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂಬ ಸಚಿವರ ಉತ್ತರಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು. ಜತೆಗೆ ಕೆಲವು ಶಾಸಕರು ಹಾಲಾಡಿ ಬೆನ್ನಿಗೆ ನಿಂತರು.ಇದನ್ನೂ ಓದಿರಿಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
ನೀವು ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಪರಿಹಾರವನ್ನೂ ಕೊಡಲ್ಲ, ತಮ್ಮ ಸ್ವಂತ ಜಾಗದಲ್ಲಿ ಮನೆ ಅಥವಾ ಕಟ್ಟಡ ಕಟ್ಟಿಕೊಳ್ಳಲೂ ಅವಕಾಶ ಕೊಡಲ್ಲ. ಸಣ್ಣ ಜಾಗ ಹೊಂದಿರುವ ಬಡವರು, ಸಾಮಾನ್ಯರು ಏನು ಮಾಡಬೇಕು ಎಂದು ಪ್ರಶ್ನಿಸಿದರು. ಅಂತಿಮವಾಗಿ, ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಒಂದು ನಿರ್ಣಯಕ್ಕೆ ಬರಲಾಗುತ್ತದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.
ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ವಿಡಿಯೋ ಕಾಲ್​ ರಿಸೀವ್​ ಮಾಡಿ ಹನಿಟ್ರ್ಯಾಪ್​ಗೆ ಬಿದ್ದ ಮಾಜಿ ಶಾಸಕನ ಪುತ್ರನಿಗೆ ಸಂಕಷ್ಟ!

ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಸಿಇಟಿ, ನೀಟ್‌‌ಗೆ ಆನ್‌ಲೈನ್‌ ಕೋಚಿಂಗ್‌: ‘ಗೆಟ್‌-ಸೆಟ್‌ ಗೋ’ಗೆ ಚಾಲನೆ ಕೊಟ್ಟ ಸಿಎಂ

ಅಯ್ಯೋ, ಮಗಳೇ ಕಾಲೇಜಿಗೆ ಹೋಗವ್ವ ಅಂದಿದ್ದೇ ತಪ್ಪಾಯ್ತಾ? ನಡೆದೇ ಹೋಯ್ತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − three =
Remember me
