ಬೆಂಗಳೂರು:ಮನೆ ಎದುರು ರಸ್ತೆ ಬದಿಗೆ, ರಸ್ತೆಯ ಇಕ್ಕೆಲಗಳಲ್ಲಿ ವಾಹನ ಪಾರ್ಕಿಂಗ್ ಮಾಡುವ ಹಾಗಿಲ್ವಾ? ಮಾಡಿದ್ರೆ ಶುಲ್ಕ ಪಾವತಿಸಬೇಕಾ? ಎಷ್ಟು ಶುಲ್ಕ ಎಂಬಿತ್ಯಾದಿ ಸಾರ್ವಜನಿಕ ಕುತೂಹಲದ ಪ್ರಶ್ನೆಗಳಿಗೆ ಉತ್ತರ ನೀಡುವಂತಹ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಮಂಗಳವಾರ ನಡೆಯಿತು. ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
ರಸ್ತೆ ಬದಿ ಪಾರ್ಕಿಂಗ್ ನಿಯಂತ್ರಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಈ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದ್ದು, ಅನೇಕ ಸಲಹೆಗಳ ಪರಿಶೀಲನೆ ನಡೆದಿದೆ. ಆದರೆ, ಮನೆ ಎದುರು ರಸ್ತೆ ಬದಿಗೆ, ರಸ್ತೆಯ ಇಕ್ಕೆಲಗಳಲ್ಲಿ ವಾಹನ ಪಾರ್ಕ್ ಮಾಡಿದ್ದಕ್ಕೆ ಶುಲ್ಕ ವಸೂಲಿ ಮಾಡುವ ನಿರ್ಧಾರ ಸದ್ಯಕ್ಕೆ ಜಾರಿಗೊಳಿಸದಿರಲು ಸರ್ಕಾರ ತೀರ್ಮಾನಿಸಿದೆ. ಹೀಗಾಗಿ ಬೆಂಗಳೂರಿನ ವಾಹನ ಮಾಲೀಕರು ಸದ್ಯಕ್ಕೆ ರಿಲೀಫ್ ಆಗಿರಬಹುದು.
ಇದನ್ನೂ ಓದಿ:ಬೆನಜೀರ್ ಭುಟ್ಟೋ ಕಿರಿ ಮಗಳು ಅಸೀಫಾ ರಾಜಕೀಯಕ್ಕೆ
ಸಮಿತಿ ರಚನೆ: ನಗರ ಭೂಸಾರಿಗೆ ನಿರ್ದೇಶನಾಲಯ(ಡಲ್ಟ್) ರೂಪಿಸಿ ಸಲ್ಲಿಸಿದ್ದ ಶಿಫಾರಸು ವರದಿ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಕಾರಣ ಅದರ ಪರಾಮರ್ಶೆಗೆ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಲು ಸರ್ಕಾರ ತೀರ್ಮಾನಿಸಿದೆ. ಸಮಿತಿ ನೀಡುವ ವರದಿ ಆಧರಿಸಿ ತೀರ್ಮಾನ ತೆಗೆದುಕೊಳ್ಳಲು ಸಿಎಂ ಬಿಎಸ್​ವೈ ನಿರ್ಧರಿಸಿದ್ದಾರೆ.
ಅಸ್ಸಾಂ, ತಮಿಳುನಾಡು ಚುನಾವಣೆ: ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಿತು ಕಾಂಗ್ರೆಸ್ ಸಭೆ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 16 =
Remember me
