ಚಿಕ್ಕೋಡಿ:ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ನ್ಯಾಯಾಧೀಶರ ಮನೆಯೇ ಸುರಕ್ಷಿತವಾಗಿಲ್ಲ ಎಂದಾದರೆ ಸಾಮಾನ್ಯರ ಮನೆ ಕಥೆ ಏನು? ಹೌದು ಚಿಕ್ಕೋಡಿಯ ನಿಪ್ಪಾಣಿ ಪಟ್ಟಣದಲ್ಲಿ ಈ ಖತರ್ನಾಕ್​ ಕಳ್ಳರು ನ್ಯಾಯಾಧೀಶರ ಮನೆಗೇ ಕನ್ನ ಹಾಕಿದ್ದಾರೆ.

ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣದಲ್ಲಿ ನ್ಯಾಯಾಧೀಶರ ಮನೆಗೆ ಕನ್ನ ಹಾಕಲಾಗಿದ್ದು ಮನೆಯೊಳಗಿದ್ದ ಎಲ್ಲಾ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಅಲ್ಲಿಂದ ಕಾಲು ಕಿತ್ತಿದ್ದಾರೆ. ಕಳ್ಳರು ಮನೆಯಲ್ಲಿ ಯಾರು ಇಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡೇ ಇವರು ಕಳ್ಳತನ ಮಾಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ನಿಪ್ಪಾಣಿ ಪೊಲೀಸರು, ಸ್ಥಳಕ್ಕೆ ಶ್ವಾನ ದಳದ ಜತೆಗೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
