ಬೆಂಗಳೂರು:ರಾಜ್ಯ ರಾಜಧಾನಿಯ ನಿವಾಸಿಗಳೇ ಎಚ್ಚರ! ನೀವು ರಾತ್ರಿ ವೇಳೆ ರಸ್ತೆಗೆ ಬರೋಕು ಮುನ್ನ ಈ ಸ್ಟೋರಿ ಓದಿ.
ಪೊಲೀಸ್ ಸಿಬ್ಬಂದಿಯಲ್ಲೂ ಕರೊನಾ ಸೋಂಕು ಹೆಚ್ಚಾಗಿ ಬಹುತೇಕ ಎಲ್ಲ ಠಾಣೆಯಲ್ಲೂ ಸಿಬ್ಬಂದಿ ಕೊರತೆ ಕಾಡುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ದುಷ್ಕರ್ಮಿಗಳು ದರೋಡೆಗಾಗಿ ಫೀಲ್ಡಿಗೆ ಇಳಿದಿದ್ದಾರೆ! ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಯುವಕರಿಬ್ಬರನ್ನು ನಡುರಸ್ತೆಯಲ್ಲೇ ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇದನ್ನೂ ಓದಿರಿವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಗೆ ಕರೊನಾ!
ಮಡಿವಾಳ ಪೊಲೀಸ್ ಠಾಣೆ ಸೀಲ್​ಡೌನ್‌ ಆಗಿದ್ದ ಸಮಯದಲ್ಲೇ ಠಾಣಾ ವ್ಯಾಪ್ತಿಯ ತಾವರೆಕೆರೆ ಮುಖ್ಯರಸ್ತೆ ಭುವನಪ್ಪ ಲೇಔಟ್​ನಲ್ಲಿ ರಾಬರಿ ನಡೆದಿದೆ. ಜೂ. 27ರ ಮಧ್ಯರಾತ್ರಿ ಎರಡು ಬೈಕ್​ಗಳಲ್ಲಿ ಮೂವರಂತೆ ಬಂದ ದುಷ್ಕರ್ಮಿಗಳು ಇಬ್ಬರು ಯುವಕರನ್ನ ನಡುರಸ್ತೆಯಲ್ಲೇ ಅಡ್ಡಗಟ್ಟಿ ಚಾಕು ತೋರಿಸಿ ಅಟ್ಯಾಕ್ ಮಾಡಿದ್ದಾರೆ.
ಇದನ್ನೂ ಓದಿರಿಕೋವಿಡ್​ಗೆ ಔಷಧಿ ಕೊಡಿಸುವ ನೆಪದಲ್ಲಿ ಅತ್ಯಾಚಾರ! ಸೋಂಕಿನ ಹೆಸರಲ್ಲಿ ಕಾಮುಕರ ಅಟ್ಟಹಾಸ
ಜೂ.27ರ ಮಧ್ಯರಾತ್ರಿ 12.30ಕ್ಕೆ ಖಾಸಗಿ ಕಂಪನಿಯೊಂದರ ಉದ್ಯೋಗಿ ಗೌರವ್ ಅಗರ್​ವಾಲ್( 27 )ಮತ್ತು ಸ್ನೇಹಿತ ಮನೆಗೆ ಹೋಗುತ್ತಿದ್ದರು. ಆ ವೇಳೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಇಬ್ಬರ ಬಳಿ ರಾಬರಿಗೆ ಮುಂದಾಗಿದ್ದಾರೆ. ಇದಕ್ಕೆ ಪ್ರತಿರೋಧ ತೋರಿದಾಗ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಕೆಳಗೆ ಬೀಳಿಸಿ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಗೌರವ್ ಅಗರ್​ವಾಲ್ ಮತ್ತು ಇವರ ಸ್ನೇಹಿತನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.facebook.com/VVani4U/videos/310702999954589/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 6 =
Remember me
