ಮೈಸೂರು:ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದ ಮಾಜಿ ಸಚಿವ ಹಾಗೂ ಜೆಡಿಎಸ್​ ಶಾಸಕ ಸಾರಾ ಮಹೇಶ್,​ ಇದೀಗ ರೋಹಿಣಿ ಸಿಂಧೂರಿ ವಿರುದ್ಧ ಬಹುಕೋಟಿ ಹಗರಣದ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಶಾಸಕರು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ, ರೋಹಿಣಿ ಸಿಂಧೂರಿ, ಮೈಸೂರು ಡಿಸಿ ಆಗುವುದಕ್ಕೂ ಮುಂಚೆ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿದ್ದರು. ಆಂಧ್ರಪ್ರದೇಶದ ತಿರುಮಲದಲ್ಲಿ ವಸತಿ ಗೃಹ, ಕಲ್ಯಾಣ ಮಂಟಪ ಹಾಗೂ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಅದರ ಆಧಾರದ ಮೇಲೆ 2020ರ ಜೂನ್ 30ರಂದು ಸರ್ಕಾರ ಆದೇಶ ಮಾಡಿದೆ ಎಂದರು.
ಇದನ್ನೂ ಓದಿ:ಸಿಎಟಿ ಅಂಗಳಕ್ಕೆ ರೋಹಿಣಿ ವರ್ಗಾವಣೆ: 6ಕ್ಕೆ ವಿಚಾರಣೆ
200 ಕೋಟಿ ರೂ. ಕಾಮಗಾರಿಯ ನಿರ್ಮಾಣ, ನಿರ್ವಹಣೆಯನ್ನು ಟಿಟಿಡಿಗೆ ರಾಜ್ಯ ಸರ್ಕಾರ ವಹಿಸಿದೆ. ಆರ್ಕಿಟೆಕ್ಚರ್, ಲ್ಯಾಂಡ್‌ಸ್ಕೇಪಿಂಗ್ ಮತ್ತು ಇಂಟೀರಿಯರ್ ವಿನ್ಯಾಸದ ಕೆಲಸವನ್ನು ಮೆ. ಗಾಯತ್ರಿ ಆ್ಯಂಡ್ ನಮಿತ್ ಆರ್ಕಿಟೆಕ್ಟ್ಸ್ ಅವರಿಗೆ ನೀಡಲಾಗಿದೆ. ಇದಕ್ಕಾಗಿ ಸಾರ್ವಜನಿಕ ಸಂಗ್ರಹಣೆಯ ಪಾರದರ್ಶಕತೆ ಕಾಯ್ದೆ 1999ರ ಅಡಿ ವಿನಾಯಿತಿ ಕೂಡ ನೀಡಲಾಗಿದೆ. ಅಂದ್ರೆ ಈ ಮೂಲಕ 10 ಕೋಟಿ ರೂ. ನೀಡಲಾಗಿದೆ. ನಮ್ಮಲ್ಲಿ ಹಾಗೂ ನಮ್ಮ ಸರ್ಕಾರದಲ್ಲಿ ಆರ್ಕಿಟೆಕ್ಟ್, ವಿನ್ಯಾಸಗಾರರೇ ಇಲ್ಲವೇ? ಬೇರೆ ರಾಜ್ಯದವರಿಗೇಕೆ ನೀಡಬೇಕಿತ್ತು? ಎಂದು ಸಾ.ರಾ.ಮಹೇಶ್ ಪ್ರಶ್ನಿಸಿದರು.
ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹರಿಹಾಯ್ದ ಸಾರಾ ಮಹೇಶ್​..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
