ಬೆಂಗಳೂರು:ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ಅ.26) ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಿಗದಿಯಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯ 30 ಸದಸ್ಯರನ್ನೊಳಗೊಂಡ ಸಲಹಾ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಸಾಧಕರ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿದೆ. ಸಿಎಂ ನೇತೃತ್ವದಲ್ಲಿ ಗುರುವಾರ ನಡೆಯುವ ಸಭೆಯಲ್ಲಿ ಅಂತಿಮವಾಗಿ ಪುರಸ್ಕೃತರ ಆಯ್ಕೆ ಮಾಡುವ ಸಾಧ್ಯತೆಯಿದೆ.
ಪ್ರಶಸ್ತಿಗಾಗಿ ಸೇವಾ ಸಿಂಧು ಫೋರ್ಟಲ್ ಮೂಲಕ 25 ಸಾವಿರಕ್ಕೂ ಅಧಿಕ ನಾಮನಿರ್ದೇಶನಗಳು ಸಲ್ಲಿಕೆಯಾಗಿವೆ. ಕೆಲವರು ಭೌತಿಕವಾಗಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ತಜ್ಞರ ಸಲಹಾ ಸಮಿತಿಯು ವಿವಿಧ ಕ್ಷೇತ್ರಗಳ ಸಾಧಕರ ಹೆಸರನ್ನು1:2 ಅನುಪಾತದಲ್ಲಿ ಸಿದ್ಧಪಡಿಸಿದ್ದು, ಅದನ್ನು ಮುಖ್ಯಮಂತ್ರಿಯವರ ನೇತೃತ್ವದ ಸಭೆಯಲ್ಲಿ ಸಲ್ಲಿಸಲಿದೆ. ಈ ಬಾರಿ 68 ಪುರಸ್ಕೃತರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದ್ದು, ಸಾಹಿತ್ಯ, ಸಂಗೀತ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರದ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ತಲಾ 5 ಲಕ್ಷ ನಗದು, 25 ಗ್ರಾಂ ಚಿನ್ನದ ಪದಕ ಹಾಗೂ ಸ್ಮರಣಿಕೆ ಒಳಗೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + thirteen =
Remember me
