ಬೆಂಗಳೂರು:ನಗರ ಮತ್ತು ಗ್ರಾಮೀಣ ಭಾರತದ ಬಡ ಮತ್ತು ಕಡಿಮೆ ಆದಾಯದ ಕುಟುಂಬಗಳಿಗೆ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುವಲ್ಲಿ ಮೈಕ್ರೊಫೈನಾನ್ಸ್ ಸಂಸ್ಥೆಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಅವರು ತಿಳಿಸಿದರು.
ನಗರದ ಖಾಸಗಿ ಹೋಟಲ್ನಲ್ಲಿ ಕರ್ನಾಟಕ ಕಿರು ಹಣಕಾಸು ಸಂಸ್ಥೆಗಳ ಒಕ್ಕೂಟ ಮಂಗಳವಾರ ಆಯೋಜಿಸಿದ್ದ ‘ಮೈಕ್ರೋಫೈನಾನ್ಸ್ ಕರ್ನಾಟಕ ಸಮಿಟ್-2023’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗ್ರಾಮೀಣ ಪ್ರದೇಶದ ಜನರ ಆರ್ಥಿಕತೆ ಬಲಪಡಿಸುವ ನಿಟ್ಟಿನಲ್ಲಿ ಸಹಾಯ ಮಾಡುತ್ತಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು (ಎಂಎಫ್​​ಐ) ಬಡತನದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸ್ವಸಹಾಯ ಗುಂಪುಗಳ (ಎಸ್‌ಎಚ್‌ಜಿ) ಬೆಂಬಲದೊಂದಿಗೆ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯವನ್ನು ಉತ್ತೇಜಿಸಲು ಕೆಲಸ ಮಾಡಿವೆ. ರಾಜ್ಯದ 31 ಜಿಲ್ಲೆಗಳಲ್ಲಿ ಕಡಿಮೆ ಆದಾಯದ ಕುಟುಂಬಗಳಿಗೆ ಸೇರಿದ 56 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸ್ವಯಂ ಉದ್ಯೋಗಾವಕಾಶ ಒದಗಿಸುವ ಅತಿ ಹೆಚ್ಚು ಮೈಕ್ರೋ ಫೈನಾನ್ಸ್ ಸಾಲವನ್ನು ಹೊಂದಿರುವ ದೇಶದ ಅಗ್ರ 5 ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ ಎಂದರು.
ನಬಾರ್ಡ್‌ನ ಮಾಜಿ ಮುಖ್ಯ ಪ್ರಧಾನ ವ್ಯವಸ್ಥಾ ಎಸ್. ಶ್ರೀನಿವಾಸನ್ ಮಾತನಾಡಿ, ಎಂಎಫ್​ಐಗಳು ದುರ್ಬಲ, ಕಡಿಮೆ ಆದಾಯದ ಜನರಿಗೆ ಒಳ್ಳೆಯದನ್ನು ಮಾಡುವ ಶಕ್ತಿಯನ್ನು ಹೊಂದಿದೆ. ಅನೇಕ ಗ್ರಾಹಕರು ಮೈಕ್ರೋ ಫೈನಾನ್ಸ್‌ನ ನಿರಂತರ ಲಭ್ಯತೆಯಿಂದ ತಮ್ಮ ಜೀವನೋಪಾಯ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಿದ್ದಾರೆ. ಅಲ್ಲದೆ, ಗ್ರಾಹಕರು ತರಬೇತಿ ಮತ್ತು ಅಭ್ಯಾಸದ ಮೂಲಕ ಆರ್ಥಿಕವಾಗಿ ಸಮರ್ಥರಾಗುತ್ತಾರೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − eight =
Remember me
