ಬೆಂಗಳೂರು:ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಯನ್ನು ಕಡಲೆಕಾಯಿ ಪರಿಷೆಗೆ ಬಂದಿದ್ದ ವೇಳೆ ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿ ನಿವಾಸಿ ಪ್ರತ್ವಿಕ್(೨೧) ಬಂಧಿತ ರೌಡಿ.
೨೦೧೯ರ ನವೆಂಬರ್ ೧೯ರಂದು ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳಾದ ಅಭಿಷೇಕ್ ಮತ್ತು ಪ್ರತ್ವಿಕ್ ಸೇರಿಕೊಂಡು ಅಭಿಷೇಕ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿತ್ತು.
ಜಾಮೀನು ಪಡೆದು ಹೊರ ಬಂದಿದ್ದ ಆರೋಪಿ ಪ್ರತ್ವಿಕ್, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ನಾಲ್ಕು ಬಾರಿ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಆರೋಪಿಯ ಬಂಧನಕ್ಕೆ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಆರೋಪಿಯು ಪ್ರತಿ ವರ್ಷ ಬಸವನಗುಡಿ ಕಡಲೆಕಾಯಿ ಪರಿಷೆಗೆ ತಪ್ಪದೇ ಬರುತ್ತಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿಯ ಹಿನ್ನೆಲೆಯಲ್ಲಿ ಆರೋಪಿಗಾಗಿ ಕಾದು ಕುಳಿತ್ತಿದ್ದ ಪೊಲೀಸರ ತಂಡ ಮಂಗಳವಾರ ಈತನನ್ನು ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿದ್ದಾಗ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
