ಬೆಂಗಳೂರು :ಸಿಲಿಕಾನ್ ಸಿಟಿಯಲ್ಲಿ ಹಾಡುಹಗಲೇ ರಸ್ತೆಯಲ್ಲಿ ರೌಡಿಶೀಟರ್ ಮೇಲೆ ದುಷ್ಕರ್ಮಿಗಳ ಗ್ಯಾಂಗ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಸವೇಶ್ವರನಗರದ ಹರೀಶ್ (29) ಮೃತಪಟ್ಟ ರೌಡಿ. ಬುಧವಾರ ಮಧ್ಯಾಹ್ನ ಬಾಣಸವಾಡಿ ಪೊಲೀಸ್ ಠಾಣೆಯ ಬಳಿಯೇ ನಡುರಸ್ತೆಯಲ್ಲಿ ಕೊಲೆ ಮಾಡಿದ್ದಾರೆ.
ಇತ್ತೀಚೆಗೆ ಬನಶಂಕರಿ ದೇವಸ್ಥಾನ ಮುಂಭಾಗ ಫೈನಾಸ್ಸಿಯರ್ ಮತ್ತು ಬ್ಯಾಂಕ್‌ನಲ್ಲಿ ರೌಡಿಶೀಟರ್ ಹತ್ಯೆಗಳು ನಡೆದಿದ್ದವು. ಈ ಎರಡು ಪ್ರಕರಣಗಳು ಮಾಸುವ ಮೊದಲೇ, ಮತ್ತೊಂದು ಭೀಕರ ಹತ್ಯೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕೊಲೆ, ಕೊಲೆ ಯತ್ನ ಸೇರಿದಂತೆ 4 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹರೀಶ್ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಕೆಲ ವರ್ಷಗಳಿಂದ ಏರಿಯಾ ಬಿಟ್ಟು ಬಸವೇಶ್ವರನಗರದಲ್ಲಿ ನೆಲೆಸಿದ್ದ. ಅಲ್ಲಿಯೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಬಾಣಸವಾಡಿ ಪೊಲೀಸರು, ನೋಟಿಸ್ ಕೊಟ್ಟು ವಿಚಾರಣೆಗೆ ಕರೆದಿದ್ದರು.
ಇದನ್ನೂ ಓದಿ:2020ರಲ್ಲಿ ಎರಡೆರೆಡು ಬಾರಿ ಜನಿಸಿದ ನಟ ಮಿಲಿಂದ್ ಸೋಮನ್?!
ಬುಧವಾರ ಬಾಣಸವಾಡಿ ಪೊಲೀಸರ ಮುಂದೆ ಹಾಜರಾದ ಹರೀಶ್​ನಿಂದ ಪೊಲೀಸರು, ಸಿಆರ್‌ಪಿಸಿ ಸೆಕ್ಷನ್​ 110 ರಡಿ ಕೇಸ್ ದಾಖಲಿಸಿ ಹೇಳಿಕೆ ಪಡೆದಿದ್ದರು. ಅಲ್ಲದೆ, ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ಕೊಟ್ಟು ಮುಚ್ಚಳಿಕೆ ಬರೆಸಿಕೊಂಡಿದ್ದರು. ಪೊಲೀಸರು ಇತ್ತೀಚಿನ ಫೋಟೋ ಕೇಳಿದಾಗ, ‘ಊಟ ಮಾಡಿಕೊಂಡು ಹಾಗೇ ಹೊಸದಾಗಿ ಫೋಟೋ ತೆಗೆಸಿಕೊಂಡು ಬರುವುದಾಗಿ’ ಹೇಳಿ ಹರೀಶ್ ಹೊರಬಂದು ಬೈಕ್‌ನಲ್ಲಿ ಹೋಗುತ್ತಿದ್ದ. ಇದೇ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್, ಏಕಾಏಕಿ ಹರೀಶ್‌ಗೆ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೆಳಗೆ ಬಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ಪರಾರಿಯಾಗಿದ್ದಾರೆ.
ನಡುರಸ್ತೆಯಲ್ಲಿ ದುಷ್ಕೃತ್ಯ ನಡೆದ ಕಾರಣಕ್ಕೆ ಸಾರ್ವಜನಿಕರು ಬೆಚ್ಚಿಬಿದ್ದು, ಕೆಲಕಾಲ ಆತಂಕದ ವಾತಾವರಣ ಆವರಿಸಿತ್ತು. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರ ಮಾಡಿದ್ದಾರೆ. ಅಕ್ಕಪಕ್ಕದ ಸಿಸಿ ಕ್ಯಾಮರಾ ದೃಶ್ಯಾವಳಿ ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಪದಕ ತಂದ ಪದವಿ: ಮೀರಾಬಾಯಿ ಆಗಲಿದ್ದಾರೆ ಉನ್ನತ ಪೊಲೀಸ್​ ಅಧಿಕಾರಿ!

ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಸಂಪೂರ್ಣ ಪ್ರಕ್ರಿಯೆ ಆನ್‌ಲೈನ್‌ನಲ್ಲಿ!

ಶರೀರಕ್ಕೆ ಮೃದುವಾದ ವ್ಯಾಯಾಮ ನೀಡುವ ಸುಲಭ ಆಸನವಿದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × one =
Remember me
