ತುಮಕೂರು:ತಿಪಟೂರು ತಾಲೂಕಿನ ಹೊಸಹಳ್ಳಿಯಲ್ಲಿ ರೌಡಿಶೀಟರ್ ದಿವಾಕರ್ ಅಲಿಯಾಸ್​ ಡಿಚ್ಚಿ ದಿವಾ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಿಪಟೂರು ತಾಲೂಕಿನ ಹುಚ್ಚನಹಳ್ಳಿ ನಿವಾಸಿ ದಿವಾಕರ್, ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ತಿಪಟೂರಿನಿಂದ ಹುಚ್ಚನಹಳ್ಳಿ ಕಡೆಗೆ ಹೋಗುತ್ತಿದ್ದ. ಮಾರ್ಗಮಧ್ಯೆ ಹೊಸಹಳ್ಳಿ ನಾಲ್ಕೈದು ಜನರ ಗುಂಪು ದಾಳಿ ಮಾಡಿ ಮನಸೋಇಚ್ಛೆ ಕೊಚ್ಚಿ ಪರಾರಿಯಾಗಿದೆ. ರಕ್ತದ ಮಡುವಿನಲ್ಲಿ ಬಿದಿದ್ದ ದಿವಾಕರ್​ನನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾನೆ.
ಮೃತ ದಿವಾಕರ್​ ಅಲಿಯಾಸ್​ ಡಿಚ್ಚಿ ದಿವಾ ರೌಡಿಶೀಟರ್ ಆಗಿದ್ದ. ಹೊನ್ನವಳ್ಳಿ, ತಿಪಟೂರು ಟೌನ್, ಎನ್​ಇಪಿಎಸ್ ಜಯನಗರ, ದಾಬಸ್​ಪೇಟೆ, ಬೆಂಗಳೂರು ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ ಪ್ರಕರಣಗಳು ದಾಖಲಾಗಿದ್ದವು. ದಿವಾಕರ್​ನನ್ನು ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಿಗೆ ತಿಪಟೂರು ಗ್ರಾಮಾಂತರ ಪೊಲೀಸರು ಠಾಣೆ ಬಲೆ ಬೀಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + 16 =
Remember me
