ತುಮಕೂರು:ಲಿಕ್ಕರ್ ಶಾಪ್ ಮುಂದೆ ರೌಡಿಶೀಟರ್​ವೊಬ್ಬ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಯಾರೊಬ್ಬರೂ ಆಸ್ಪತ್ರೆಗೆ ಸೇರಿಸುವ ಧೈರ್ಯ ತೋರಲಿಲ್ಲ. ಪೊಲೀಸರು ಬರುವವರೆಗೆ ಆತ ನೋವಿನಿಂದ ಚೀರಾಡುತ್ತಲೇ ಇದ್ದ. ಕೆಲವೇ ಕ್ಷಣದಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿದೆ. ಅಲ್ಲೇ ಇದ್ದ ಕೆಲವರು ಇದನ್ನು ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಗರದ ಬಿ.ಎಚ್.ರಸ್ತೆಯ ಮಂಜುಶ್ರೀ ಲಿಕ್ಕರ್ ಶಾಪ್ ಬಳಿ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಮಂಜ(32) ಎಂಬಾತನನ್ನು ದುಷ್ಕರ್ಮಿಗಳು ಬುಧವಾರ ರಾತ್ರಿ 9.45ರಲ್ಲಿ ಹತ್ಯೆಗೈದಿದ್ದಾರೆ. ಹತ್ಯೆಗೀಡಾದ ಮಂಜ ಕೆಲವು ವರ್ಷಗಳ ಹಿಂದೆ ಕೊಲೆಗೀಡಾಗಿದ್ದ ನಗರಸಭೆ ಸದಸ್ಯ ಆಂಜನಿಯ ಅಕ್ಕನ ಮಗ.
2012ರಿಂದ ಕ್ಯಾತಸಂದ್ರ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿ ಮಂಜುನಾಥ್ ಹೆಸರಿದ್ದು, ಹೊಸಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣವೊಂದರಲ್ಲಿ ಈತ ಆರೋಪಿಯಾಗಿದ್ದ. 2018ರಲ್ಲಿ ಕೊಲೆಯಾಗಿದ್ದ ಮಾಜಿ ಮೇಯರ್ ಗಡ್ಡ ರವಿ ಜತೆ ಮಂಜುನಾಥ್ ಗುರುತಿಸಿಕೊಂಡಿದ್ದ. ಮೂಲತಃ ಕನಕಪುರ ತಾಲೂಕಿನ ಮಂಜ ಬೆಳೆದಿದ್ದು ತುಮಕೂರಿನಲ್ಲಿಯೇ. ಪೊಲೀಸ್ ಮಾಹಿತಿದಾರನಾಗಿದ್ದ ಎನ್ನಲಾಗಿದೆ.
ಎರಡು ಕೊಲೆ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಬುಧವಾರ ರಾತ್ರಿ ಈತನನ್ನು ದುಷ್ಕರ್ಮಿಗಳು ಚಾಕುವಿನಿಂದ ಹಿರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹೊಸ ಬಡಾವಣೆ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಹಳೇ ದ್ವೇಷ ಇಲ್ಲವೆ ವೈಯಕ್ತಿಕ ದ್ವೇಷದ ಕಾರಣದಿಂದ ಕೊಲೆ ನಡೆದಿದೆಯೇ ಎನ್ನುವ ವಿಚಾರ ತನಿಖೆಯಿಂದ ತಿಳಿಯಲಿದೆ. ಈಗಾಗಲೇ ಸಿಸಿ ಟಿವಿ ಕ್ಯಾಮರಾಗಳನ್ನು ಪರಿಶೀಲಿಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಕೊಲೆ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ತಿಳಿಸಿದ್ದಾರೆ.
ಮಗಳ ಚೀರಾಟ ಕೇಳಿ ಪಾಲಕರು ಓಡಿ ಬರುವಷ್ಟರಲ್ಲಿ ಹೆಣವಾಗಿದ್ದಳು! ಅಲ್ಲೇ ಕುಳಿತಿದ್ದ ಬಾಲಕ ಬಾಯ್ಬಿಟ್ಟ ಸ್ಫೋಟಕ ರಹಸ್ಯ

ಸರ್ಕಾರದ 2 ಲಕ್ಷ ರೂ. ಪರಿಹಾರ ಪಡೆಯಲು ಯಾರೂ ಇಲ್ಲ..! ಇದ್ದರೆ ದಯವಿಟ್ಟು ಸಂಪರ್ಕಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
