ಬೆಂಗಳೂರು:‘ಡಿ.ಕೆ. ರವಿ ಹೆಸರನ್ನು ಯಾರೇ ಬಳಸಿಕೊಂಡರೂ ಅವರಿಗೆ ಒಳ್ಳೆಯ ದಾಗಲ್ಲ’ ಎಂಬ ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಕ್ಕೆ ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಿರುಗೇಟು ನೀಡಿದ್ದಾರೆ.
‘ಪ್ರೀತಿಯ ಅಕ್ಕ, ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು, ಮಾಡುತ್ತಿರೋರು ಯಾರು? ಎನ್ನು ವುದನ್ನು ಇಡೀ ದೇಶವೇ ನೋಡಿದೆ. ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕಮಹಾ ದೇವಿ ಅವರ ‘ನೊಂದವರ ನೋವ ನೋಯದವರೆತ್ತ ಬಲ್ಲರೊ’ ಎಂಬ ವಚನ ನೆನಪಿಗೆ ಬರುತ್ತಿದೆ’ ಎಂದು ಕರಂದ್ಲಾಜೆಯವರನ್ನು ಉದ್ದೇಶಿಸಿ ಲೇವಡಿ ಮಾಡಿದ್ದಾರೆ.
ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ! ಇದು ನಿಮಗೆ ನೀವೇ ಹೇಳಿಕೊಂಡಂತಿದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು’ ಎಂದು ಕುಸುಮಾ ಹೇಳಿದ್ದಾರೆ. ಡಿ.ಕೆ. ರವಿ ಮೃತಪಟ್ಟ ಸಂದರ್ಭದಲ್ಲಿ ಬಿಜೆಪಿ ಮತ್ತು ಶೋಭಾ ಕರಂದ್ಲಾಜೆ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರು. ಈ ವಿಚಾರವನ್ನು ಪ್ರಸ್ತಾಪಿಸದೇ ಕುಸುಮಾ ಶೋಭಾರನ್ನು ಕುಟುಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
