ಬೆಂಗಳೂರು:ರಾಜರಾಜೇಶ್ವರಿ ನಗರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಪೊಲೀಸ್​ ಇನ್ಸ್​ಪೆಕ್ಟರ್​ರನ್ನು ವರ್ಗಾವಣೆ ಮಾಡಲಾಗಿದೆ.
ಆರ್​ಆರ್ ನಗರ ಠಾಣೆಯ ಇನ್ಸ್​​​​ಪೆಕ್ಟರ್ ನವೀನ್ ಸುಪೇಕರ್.​ ವಿ ಅವರನ್ನು ರಾಜ್ಯ ಗುಪ್ತವಾರ್ತೆ ಇಲಾಖೆಗೆ ವರ್ಗಾವಣೆ ಮಾಡಿ ಡಿಜಿ & ಐಜಿಪಿ ಶನಿವಾರ ಆದೇಶ ಹೊರಡಿಸಿದೆ.
ನಾಮಪತ್ರ ಸಲ್ಲಿಕೆ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಕುಸುಮಾ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾರು ಚಾಲಕನ ವಿರುದ್ಧ ಇನ್ಸ್​ಪೆಕ್ಟರ್​ ನವೀನ್​ ಎಫ್​ಐಆರ್​ ದಾಖಲಿಸಿದ್ದರು.
ಇದನ್ನೂ ಓದಿ:ಡಿ.ಕೆ. ಶಿವಕುಮಾರ್ ಗೂಂಡಾ ರಾಜಕಾರಣಿ: ಶೋಭಾ ಕರಂದ್ಲಾಜೆ ವಾಗ್ದಾಳಿ
ನಾಮಪತ್ರ ಸಲ್ಲಿಸುವ ಕಚೇರಿಯ 100 ಮೀಟರ್ ದೂರದಲ್ಲಿ ಬ್ಯಾರಿಕೇಡ್​ ಅಳವಡಿಸಲಾಗಿತ್ತು. ಬ್ಯಾರಿಕೇಡ್​ ತೆಗೆದು ಕಾರುಗಳನ್ನು ನೂರು ಮೀಟರ್​ ವ್ಯಾಪ್ತಿಯೊಳಗೆ ತೆಗೆದುಕೊಂಡು ಹೋದ ಆರೋಪದಡಿಯಲ್ಲಿ ಕೇಸು ದಾಖಲಿಸಲಾಗಿತ್ತು.
ಇದೀಗ ಇನ್ಸ್​ಪೆಕ್ಟರ್​ ನವೀನ್​ರನ್ನು ವರ್ಗಾವಣೆ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ. ನಮ್ಮ ಪಕ್ಷದವರಿಗೆ ವಿನಾಕಾರಣ ತೊಂದರೆ ಕೊಟ್ಟರೆ ಅಂಥ ಅಧಿಕಾರಿಗಳನ್ನು ಎತ್ತಂಗಡಿ ಮಾಡಿಸುತ್ತೇನೆಂದು ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಎಚ್ಚರಿಕೆ ನೀಡಿದ್ದರು. ಇದೀಗ ವರ್ಗಾವಣೆ ಆಗಿರುವುದು ಕಾಕತಾಳಿಯವೋ? ಅಥವಾ ಉದ್ದೇಶಪೂರ್ವಕವೋ? ಎಂದು ಚರ್ಚೆಯಾಗುತ್ತಿದೆ.
ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್​ಐಆರ್​ ದಾಖಲು..!

ಸಸ್ಪೆಂಡ್, ಎತ್ತಂಗಡಿ ಮಾಡಿಸ್ತೀನಿ ಹುಷಾರ್!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 12 =
Remember me
