ಬೆಂಗಳೂರು:ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸಿಕ್ಕಾಪಟ್ಟೆ ಹೊಟ್ಟೆ ಉರಿ ಇದೆಯಂತೆ!
ಹೀಗಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಸದನದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದಾಗ ಅದನ್ನು ಸಮರ್ಥಿಸಿಕೊಳ್ಳಲು ಹೋಗದ ಡಿಕೆಶಿ​, ಮಾಧ್ಯಮದ ಆರೋಪ ನಂಬುವುದಿಲ್ಲ ಎನ್ನುವ ಮೂಲಕ ಸಿದ್ದರಾಮಯ್ಯರ ವಿರುದ್ಧವಾಗಿ ನಿಂತರು. ಒಂದೇ ಪಕ್ಷದಲ್ಲಿ ಇಷ್ಟೊಂದು ದ್ವೇಷ ಇರಬಾರದು ಎಂದು ಲೇವಡಿ ಮಾಡಿದರು.
‘ಕೋವಿಡ್​ ಹಿನ್ನೆಲೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಮೇಲೂ ಪ್ರಕರಣ ದಾಖಲಿಸುವಂತೆ ಡಿಕೆಶಿ​ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ, ಸಿದ್ದರಾಮಯ್ಯರ ಮೇಲೆ ಅವರಿಗೆ ಎಷ್ಟೊಂದು ಹೊಟ್ಟೆಉರಿ ಹಾಗೂ ಸಂಕಟ ಇದೆ ಎಂಬುದು ಮನದಟ್ಟಾಗುತ್ತದೆ’ ಎಂದು ಸಿ.ಟಿ.ರವಿ ಟೀಕಿಸಿದರು.
‘ಸಮಾಜ ಕಲ್ಯಾಣ ಖಾತೆ ನೀಡಿರುವ ಕುರಿತು ಶ್ರೀರಾಮುಲು ಅವರಿಗೆ ಸಂತೃಪ್ತಿ ಇದೆ. ಈ ಸಂಬಂಧ ಡಿ.ಕೆ. ಶಿವಕುಮಾರ್​ ಮಾಡಿರುವ ಟೀಕೆಗೆ ಉತ್ತರ ನೀಡಲು ಬಯಸುವುದಿಲ್ಲ. ಆದರೆ, ಡಿ.ಕೆ. ಶಿವಕುಮಾರ್​ ಇಂಧನ, ನೀರಾವರಿಯಂತಹ ದೊಡ್ಡ ಖಾತೆಯನ್ನೇ ಬಯಸುವವರು. ಹೀಗಾಗಿ, ತಮ್ಮ ಮನದ ಭಾವನೆಯನ್ನು ಶ್ರೀರಾಮುಲು ಮೇಲೆ ಹೇರುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.
ಆರ್​ಆರ್​ ನಗರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಬುಧವಾರ 2ನೇ ಸೆಟ್​ ನಾಮಪತ್ರ ಸಲ್ಲಿದರು. ಈ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಕುಸುಮಾ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರ ಕಾರು ಚಾಲಕನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಬಗ್ಗೆ ಗುರುವಾರ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದ ಡಿ.ಕೆ. ಶಿವಕುಮಾರ್, ‘ಇದೆಲ್ಲವೂ ಸರ್ಕಾರದ ಕುಮ್ಮಕ್ಕು. ಚುನಾವಣಾಧಿಕಾರಿ ಕಚೇರಿಯ ನೂರು ಮೀಟರ್ ಒಳಗಡೆ ಬಿಜೆಪಿ ಶಾಸಕರು ಮತ್ತು ಸಚಿವರು ಕೂಡ ಬಂದಿದ್ದರು. ಅವರ ಮೇಲೆ ಏಕೆ ಕೇಸ್ ಹಾಕಲಿಲ್ಲ? ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಮೇಲೆ ಕೇಸ್ ಹಾಕಲಿ. ಆದ್ರೆ ಹೆಣ್ಣು ಮಗಳ ಮೇಲೆ ಕೇಸ್ ಹಾಕಿದ್ದು ಎಷ್ಟು ಸರಿ?’ ಎಂದು ಕಿಡಿಕಾರಿದರು.
ಈ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸಿ.ಟಿ. ರವಿ, ‘ಸಿದ್ದರಾಮಯ್ಯ ಮೇಲೆ ಡಿ.ಕೆ.ಶಿವಕುಮಾರ್​ಗೆ ಹೊಟ್ಟೆಉರಿ. ಹಾಗಾಗಿ ಕೇಸ್​ ಹಾಕಬೇಕಿತ್ತು’ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ನೊಂದ ಹೆಣ್ಣು ಮಗಳ ಮೇಲೆ ಕೇಸ್ ಹಾಕಿದ್ದು ಎಷ್ಟು ಸರಿ? ನಾವು ಬೇಲ್​ ಪಡೆಯಲ್ಲ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

ಸತ್ಯನಾರಾಯಣ ಸತ್ತಾಯಿತು, ಜಯಚಂದ್ರಾನು ಸಾಯ್ತಾನೆ !

ಮಹಿಳೆಯರಿಗೆ ಕೋಟ್ಯಂತರ ರೂ. ವಂಚನೆ, ಮಂಗಳಮುಖಿಯಿಂದ ಬಯಲಾಯ್ತು ಸ್ಫೋಟಕ ರಹಸ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
