ಬೆಂಗಳೂರು:ಆರ್​ಆರ್​ ನಗರ ಕ್ಷೇತ್ರದ ಉಪ ಚುನಾವಣಾ ಅಖಾಡ ಮತ್ತಷ್ಟು ರಂಗೇರಿದೆ. ಪ್ರಮುಖ ಮೂರು ಪಕ್ಷದ ಅಭ್ಯರ್ಥಿಗಳು ಬುಧವಾರ ನಾಪಪತ್ರ ಸಲ್ಲಿಸಿದ್ದು, ಪೈಪೋಟಿ ಏರ್ಪಟ್ಟಿದೆ.
ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್​ನಿಂದ ಕುಸುಮಾ, ಜೆಡಿಎಸ್​ನಿಂದ ಕೃಷ್ಣಮೂರ್ತಿ ಅಖಾಡಕ್ಕಿಳಿದಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಮೂವರೂ ಒಂದೇ ದಿನ ಆರ್ ಆರ್ ನಗರ ಬಿಬಿಎಂಪಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿದ್ದಾರೆ. ಈ ವೇಳೆ ಆಯಾ ಪಕ್ಷದ ಪ್ರಮುಖ ನಾಯಕರು ತಮ್ಮ ಅಭ್ಯರ್ಥಿಗಳಿಗೆ ಸಾಥ್ ನೀಡಿದರು. ಪದ್ಮನಾಭ ನಗರ ನಿವಾಸದಲ್ಲಿ ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡರು ಕೃಷ್ಣ ಮೂರ್ತಿಗೆ ಬಿ ಫಾರಂ ವಿತರಿಸುತ್ತಿದ್ದಂತೆ, ರಾಜರಾಜೇಶ್ವರಿ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು. ಬಳಿಕ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರೊಂದಿಗೆ ಆಗಮಿಸಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದರು.
ನಿನ್ನೆಯೇ (ಮಂಗಳವಾರ) ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ, ಇಂದು(ಬುಧವಾರ) ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಸಾಥ್​ ನೀಡಿದರು. ಇದಕ್ಕೂ ಮುನ್ನ ತಂದೆ ಮತ್ತು ಕುಟುಂಬಸ್ಥರೊಂದಿಗೆ ನಾಗರಬಾವಿ ಬಳಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕುಸುಮಾ ಪೂಜೆ ಸಲ್ಲಿಸಿದರು.
ಬುಧವಾರ ಬೆಳಗ್ಗೆ ಮೊದಲು ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ. ಬಿಜೆಪಿ ಕಚೇರಿ ಆವರಣದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಿ ಫಾರಂ ಅನ್ನು ಮುನಿರತ್ನಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ನಳೀನ್ ಕುಮಾರ್ ಕಟೀಲ್ ಹಸ್ತಾಂತರಿಸಿದರು. ಅರವಿಂದ ಲಿಂಬಾವಳಿ ಕೂಡ ಇದ್ದರು.
ನಾಮಪತ್ರ ಸಲ್ಲಿಕೆ ಹಿನ್ನೆಲೆ ಆರ್ ಆರ್ ನಗರ ಚುನಾವಣಾಧಿಕಾರಿ ಕಚೇರಿ ಸುತ್ತಮುತ್ತ ಪೊಲೀಸ್ ಬಂದೋಬಸ್ತ್, ಎಲ್ಲೆಡೆ ಬ್ಯಾರಿಕೇಡ್ ಅವಳಡಿಸಲಾಗಿದೆಯಾದರೂ ಮೂರೂ ಪಕ್ಷದ ಕಾರ್ಯಕರ್ತರು ಕರೊನಾ ಭೀತಿಯನ್ನೂ ಮರೆತು ಜಮಾವಣೆಗೊಂಡಿದ್ದರು.
12 ಕೋಟಿ ಸಂಪತ್ತಿನ ಒಡತಿ ಕುಸುಮಾ, ಅಫಿಡವಿಟ್​ನಲ್ಲಿ ಪತಿಯ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − four =
Remember me
