ಬೆಂಗಳೂರು:  ನಗರ ಸ್ಥಳೀಯ ಸಂಸ್ಥೆಗಳ 1200 ವಾರ್ಡುಗಳಲ್ಲಿ ಮೂರು ದಿನಕ್ಕಿಂತ ಹೆಚ್ಚು ಅವಧಿಯಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳಿಗೆ 27 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪ್ರಕಟಿಸಿ, ಅಗತ್ಯವಿರುವೆಡೆ ಬೋರ್‌ವೆಲ್‌ಗಳನ್ನು ಕೊರೆಯಲು, ದುರಸ್ತಿ ಮಾಡಲು ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಪ್ರಗತಿ ಮಾಹಿತಿ ಪಡೆದು, ಇಲಾಖೆ‌ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿದ್ದರಾಮಯ್ಯ ಹಲವು ಸೂಚನೆಗಳನ್ನು ನೀಡಿದರು.
ಚರಂಡಿ ನೀರಿನ ಪೈಪ್ ಲೈನ್ ,  ಕುಡಿಯುವ ನೀರಿನ ಪೈಪ್ ಲೈನ್ ನೊಂದಿಗೆ  ಸೇರುವ  ಕಡೆಗಳಲ್ಲಿ ಪೈಪ್ ಲೈನ್ ಸ್ಥಳಾಂತರ ಗೊಳ್ಳಬೇಕು. ಕಾಂಕ್ರೀಟ್ ರಸ್ತೆಗಳನ್ನು ಹಾಕುವ ಸಂದರ್ಭದಲ್ಲಿ ಯುಜಿಡಿ ಲೈನ್ ಹಾಗೂ ನೀರಿನ ಲೈನ್ ಗಳನ್ನು ಹಾಕುವ ಮುನ್ನ ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕು
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಬೆಳವಣಿಗೆಯಲ್ಲಿ ಇಳಿಕೆಯಾಗಿದೆ. ಕೆಲವು ಜಿಲ್ಲೆಯಲ್ಲಿ ಬೆಳವಣಿಗೆಯ ಪ್ರಮಾಣ ಶೇ5 ಕ್ಕಿಂತ ಕಡಿಮೆ ಇದೆ.  ಇದನ್ನು ಸುಧಾರಿಸಲು  ಕ್ರಮ ವಹಿಸಬೇಕು
ಆಸ್ತಿ ಮತ್ತು ವಾಣಿಜ್ಯ ಮುಗ್ಗಟ್ಟುಗಳ ತೆರಿಯನ್ನು ಯಾರೂ ಉಳಿಸಿಕೊಳ್ಳುವುದಿಲ್ಲ. ಕಟ್ಟದಿದ್ದವರಿಗೆ  ನೋಟೀಸು ಕೊಟ್ಟು ಕಟ್ಟಲು ಕಾಲಮಿತಿ ನಿಗದಿ ಮಾಡಿಬೇಕು. ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಆಯುಕ್ತರಿಗೆ ತೆರಿಗೆ ವಸೂಲು ಮಾಡುವಂತೆ ಸೂಚಿಸಿ ಪತ್ರ ಬರೆಯಲು ಸಿದ್ದರಾಮಯ್ಯ ಸೂಚಿಸಿದರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 10 =
Remember me
