
ಬೆಂಗಳೂರು:ಪೊಲೀಸರು ಮಹಿಳೆಯರಿಗೆ ರಕ್ಷಣೆ ನೀಡಬೇಕು, ತಮ್ಮ ವ್ಯಾಪ್ತಿಯಲ್ಲಿ ಬಿಗಿ ನಿಗಾ ಇಡಬೇಕು. ಅಪರಾಧ ತಡೆಗೆ ಕೆಲಸ ಮಾಡಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸ್ಥಾಪಿಸಲಾದ ”ಸೇಫ್ ಸಿಟಿ ಕಮಾಂಡ್ ಸೆಂಟರ್” (ಸುರಕ್ಷಾ ನಗರ ಕಮಾಂಡ್ ಕೇಂದ್ರ) ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಇಂತಹ ಸೌಲಭ್ಯಗಳ ಪ್ರಯೋಜನಗಳು ಜನರಿಗೆ ತಲುಪಬೇಕು ಎಂದರು.
ಅಪರಾಧ ಹೆಚ್ಚಳ ಒಪ್ಪಿಕೊಂಡ ಸಿಎಂ:ಬೆಂಗಳೂರಿನಲ್ಲಿ ಸರಗಳ್ಳತನ, ಮಹಿಳೆಯರ ಮೇಲಿನ ಹಿಂಸಾತ್ಮಕ ಅಪರಾಧಗಳು ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಒಪ್ಪಿಕೊಂಡ ಅವರು, ”ನಿರ್ಭಯಾ ನಿಧಿ” ಬಳಸಿ 668 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಕೇಂದ್ರವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ನಗರವು ಎಲ್ಲರಿಗೂ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಪ್ರತಿ ಮನೆಗಳ ಮೇಲೆ ಮತ್ತು ಒಂಟಿ ಮಹಿಳೆಯರು ವಾಸಿಸುವ ನಿವಾಸಗಳ ಮೇಲೆ ಪೊಲೀಸರು ನಿಗಾ ಇಡಬೇಕು ಎಂದು ಅವರು ಒತ್ತಾಯಿಸಿದರು.
ನಗರದಲ್ಲಿ ಸಂಚಾರ ಸುಗಮಗೊಳಿಸಲು ಪೊಲೀಸರು ಗಮನಹರಿಸಬೇಕು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆಯಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು.
ನಗರದಲ್ಲಿ ಮಹಿಳೆಯ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದ ಯೋಜನೆ ಇದಾಗಿದೆ. ಮಹಿಳೆಯರ ಕುಂದುಕೊರತೆಗಳನ್ನು ಆಲಿಸಲು ಸಮಗ್ರ ಸ್ಮಾರ್ಟ್‌ ಕಂಟ್ರೋಲ್‌ ರೂಂ ಸ್ಥಾಪಿಸಲಾಗುತ್ತದೆ. ಮಹಿಳೆಯರು ನಿರ್ಭೀತಿಯಿಂದ ದೂರುಗಳನ್ನು ದಾಖಲಿಸಲು ಮಹಿಳಾ ಪೊಲೀಸರಿಂದ ನಿರ್ವಹಿಸಲ್ಪಡುವ ಗುಲಾಬಿ ಠಾಣೆ, ಮಹಿಳಾ ಪೊಲೀಸ್‌ ಪಡೆ ಕಾವಲು, ಎಲ್ಲಾ ಪೊಲಿಸ್‌ ಠಾಣೆ ಹಾಗೂ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ಮಹಿಳಾ ಸಹಾಯವಾಣಿ, ಸೂಕ್ಷ್ಮ ಪ್ರದೇಶಗಳಲ್ಲಿ ಸಿ.ಸಿ. ಟಿವಿ ಕ್ಯಾಮರಾ ಹಾಗೂ ಬೀದಿ ದೀಪಗಳ ಅಳವಡಿಕೆ, ಮಹಿಳೆಯರಿಗೆ ಮೀಸಲಿಟ್ಟ ಪಿಂಕ್‌ ಟಾಯ್ಲೆಟ್‌ಗಳ ಸ್ಥಾಪನೆ, ಎಲ್ಲಾ ರೀತಿಯ ತುರ್ತು ಸೇವೆಗಳಿಗೆ ಒಂದೇ ಸಹಾಯವಾಣಿ- 112 ಸಂಖ್ಯೆ ಜಾರಿ ಮುಂತಾದವುಗಳು ಈ ಯೋಜನೆಯ ಉದ್ದೇಶಗಳಾಗಿವೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ.60ರಷ್ಟುಹಣವನ್ನು ನೀಡುತ್ತದೆ. ಉಳಿದ ಶೇ.40ರಷ್ಟುಹಣವನ್ನು ರಾಜ್ಯ ಸರ್ಕಾರಗಳು ಭರಿಸಬೇಕು. ಬೆಂಗಳೂರು, ಲಖನೌ, ದೆಹಲಿ, ಕೋಲ್ಕತಾ, ಮುಂಬೈ, ಚೆನ್ನೈ, ಹೈದರಾಬಾದ್‌ ಹಾಗೂ ಅಹಮದಾಬಾದ್‌ ನಗರಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 15 =
Remember me
