ಬೆಂಗಳೂರು:ನಿಯಾಮವಳಿ ಉ್ಲಲಂಘಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನ್​ಗೌಡ ಪಾಟೀಲ್​ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್​ ಜಾರಿ ಮಾಡಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿರುವ ಸಿದ್ದಶ್ರೀ ಸೌಹಾರ್ದ ಸಹಕಾರ ಸಕ್ಕರೆ ಕಾರ್ಖಾನೆ ಕಳೆದ ಒಂದು ವರ್ಷದಿಂದಲೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿ ಗೋಚರಿಸಿದ್ದು, ಈ ಹಿನ್ನಲೆಯಲ್ಲಿ ಕಾರ್ಖಾನೆ ಮುಚ್ಚುವಂತೆ ನೋಟಿಸ್​ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದಲ್ಲದೆ ಕಾರ್ಖಾನೆಯ ನೊಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್​ ಮೊಕದ್ದಮೆ ದಾಖಲಿಸುವಂತೆ ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕಾರ್ಖಾನೆ ಪರಿಶೀಲನೆ ವೇಳೆ ಅವೈಜ್ಞಾನಿಕ ನಿರ್ವಹಣೆ ಸೇರಿದಂತೆ ಹಲವು ಗಂಭೀರ ಲೋಪಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಬಿಗ್​ಬಾಸ್​ ಗ್ರ್ಯಾಂಡ್​ ಫಿನಾಲೆ; ಇಂದು ಮನೆಯಿಂದ ಹೊರಬರುವ ಸ್ಫರ್ಧಿಗಳು ಯಾರು ಯಾರು ಗೊತ್ತ?
ಕೆಎಸ್‌ಪಿಸಿಬಿಯು ಸಕ್ಕರೆ ಕಾರ್ಖಾನೆಗೆ ಕೆಲವು ಷರತ್ತು ವಿಧಿಸಿ ಅನುಮತಿ ನೀಡಿತ್ತು. ಆದರೆ, ಕಳೆದ ವರ್ಷ ಮಂಡಳಿ ಪ್ರಾದೇಶಿಕ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಅನುಮತಿ ಪಡೆಯದೇ ಬಾಯ್ಲರ್ ಆರಂಭ, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕವು ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೇ ಡಿಸ್ಟಿಲರಿ ಘಟಕವನ್ನು ಸ್ಥಾಪಿಸಿರುವುದು ಕಂಡುಬಂದಿದೆ.
ನಿಯಮ ಉಲ್ಲಂಘನೆ ಸಂಬಂಧ ವಿವರ ಪಡೆಯಲು ಮಂಡಳಿ, ಕಳೆದ ಮಾರ್ಚ್‌ನಲ್ಲಿ ಕಾರ್ಖಾನೆಗೆ ನೋಟಿಸ್ ಜಾರಿಗೊಳಿಸಿತ್ತು. ನಿಯಮ ಉಲ್ಲಂಘಿಸಿದ್ದರೂ ಒಂದು ವರ್ಷದಿಂದ ಕಾರ್ಖಾನೆ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಪರಿಸರ ಮಾಲಿನ್ಯ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ  ಸಕ್ಕರೆ ಕಾರ್ಖಾನೆಗೆ ಕೇಂದ್ರ ಪರಿಸರ ಸಚಿವಾಲಯ‌ವು ಕಳೆದ ವರ್ಷ ₹1.58 ಕೋಟಿ ದಂಡ ಸಹ ವಿಧಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 3 =
Remember me
