ಮಂಗಳೂರು:ಕರಾವಳಿಯಲ್ಲಿ ಹತ್ಯೆಗೀಡಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಮಂಜೂರು ಮಾಡಿದೆ. ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾಗಿದ್ದರು ಎನ್ನಲಾದವರ ಕುಟುಂಬಕ್ಕೆ ಈ ಪರಿಹಾರ ಘೋಷಣೆ ಮಾಡಲಾಗಿತ್ತು.
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಮೊಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಹಾಗೂ ದೀಪಕ್ ರಾವ್ ಅವರ ಕುಟುಂಬಕ್ಕೆ ಈ ಪರಿಹಾರ ಧನವನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ವಿವಿಧ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಧನ ಮಂಜೂರು ಮಾಡುವಂತೆ ಡಿಜಿ-ಐಜಿಪಿ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಪರಿಹಾರ ಮಂಜೂರು ಮಾಡಲಾಗಿದೆ. ಜೂ. 19ರ ಬೆಳಗ್ಗೆ 8ಕ್ಕೆ ಮುಖ್ಯಮಂತ್ರಿ ಅವರ ಗೃಹಕಚೇರಿ ಕೃಷ್ಣದಲ್ಲಿ ಈ ಪರಿಹಾರ ಧನದ ಚೆಕ್ ಹಸ್ತಾಂತರ ಆಗಲಿದೆ.
ಇದು ದೇಶದಲ್ಲಷ್ಟೇ ಅಲ್ಲ, ದಕ್ಷಿಣ ಏಷ್ಯಾದಲ್ಲೇ ಪ್ರಥಮ: ಈ ಆಸ್ಪತ್ರೆಯ ವೈದ್ಯರು ದೇಹದೊಳಗೇ ಓಡಾಡಿ ಪರೀಕ್ಷಿಸುತ್ತಾರೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
