ಬೆಂಗಳೂರು:ನಿಯಮಬಾಹಿರವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನವನ್ನು ಬ್ಯಾಂಕ್​​ಗಳಲ್ಲಿ ಠೇವಣಿ ಇಟ್ಟ ಪ್ರಕರಣಕ್ಕೆ ಮತ್ತೇ ಜೀವಬಂದಿದೆ. ಅಕ್ರಮ ಎಸಗಿರುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಹಗರಣದ ಕುರಿತು ತನಿಖೆಗೆ ಸದನ ಸಮಿತಿ ರಚನೆಗೆ ಗ್ರೀನ್ ಸಿಗ್ನಲ್ ನೀಡಿದೆ.
ವಿಧಾನಪರಿಷತ್​ನಲ್ಲಿ ಬಿಜೆಪಿ ಸದಸ್ಯ ರಘುನಾಥ್ ಮಲ್ಕಾಪುರೆ ಅವರು ಗ್ರಾಮೀಣಾಭಿವೃದ್ಧಿ ಅನುದಾನ ಅಕ್ರಮವಾಗಿ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟ ಪ್ರಕರಣದ ಬಗ್ಗೆ ತನಿಖೆಗೆ ಒತ್ತಾಯ ಮಾಡಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ವಿಭಾಗಗಳಲ್ಲಿ ಬಿಡುಗಡೆಯಾಗಿದ್ದ ಅನುದಾನವನ್ನು ಬಳಕೆ ಮಾಡಿಕೊಳ್ಳದೆ ವಿವಿಧ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ? ಅಂತ ನೇರವಾಗಿ ಪ್ರಶ್ನಿಸಿದ್ರು.
ನಿಯಮಬಾಹಿರವಾಗಿ ಅಧಿಕಾರಿಗಳು ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ವಿಭಾಗಕ್ಕೆ ಬಿಡುಗಡೆಯಾದ ಅನುದಾನ ಬಳಕೆಯಲ್ಲಿ ಅಕ್ರಮ ಆಗಿದೆ. ಸುಮಾರು 600 ಕೋಟಿ ಅಕ್ರಮ ಆಗಿದೆ. ಬ್ಯಾಂಕ್​​ನವರು ಹಾಗೂ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಕ್ರಮ ತನಿಖೆಗೆ ಸದನ ಸಮಿತಿ ನೇಮಕ ಮಾಡಬೇಕು ಅಂತ ರಘುನಾಥರಾವ್ ಮಲ್ಕಾಪುರೆ ಒತ್ತಾಯಿಸಿದ್ರು.
ಇದಕ್ಕೆ ದನಿಗೂಡಿಸಿದ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ, ವಿಪಕ್ಷ ನಾಯಕ ಎಸ್.ಆರ್.ಪಾಟೀಲ್‌ ಅವರು ತನಿಖೆ ನಡೆಸುವ ಮೂಲಕ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಒತ್ತಾಯಿಸಿದ್ರು.
ಪಕ್ಷಾತೀತವಾಗಿ ಒತ್ತಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರದ ಪರವಾಗಿ ಉತ್ತರ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಯಾರನ್ನು ರಕ್ಷಣೆ ಮಾಡೋ ಕೆಲಸ ಸರ್ಕಾರ ಮಾಡೊಲ್ಲ ಅಂತ ಘೋಷಿಸಿದ್ರು. ಅಧಿಕಾರಿಗಳು ಯಾವುದೇ ರೀತಿಯಲ್ಲೂ ಇಲಾಖೆಗೆ ಸೂಚನೆ ನೀಡದೇ ಸಿಂಡಿಕೇಟ್ ಬ್ಯಾಂಕ್ ನಲ್ಲಿ 90 ಖಾತೆ ಓಪನ್ ಮಾಡಿದ್ದಾರೆ. ಈಗಾಗಲೇ ಅಕ್ರಮದ ಕುರಿತು ತನಿಖೆ ಕೂಡಾ ಆಗಿದೆ. 200 ಕೋಟಿ ಲೂಟಿ ಆಗಿದೆ. ಸಿಂಡಿಕೇಟ್ ಬ್ಯಾಂಕ್​ನವರು 80 ಕೋಟಿ ಕೊಡ್ತೀವಿ ಅಂತ ಹೇಳ್ತಿದ್ದಾರೆ‌. ಸರ್ಕಾರದ ಅನುಮತಿ ಇಲ್ಲದೆ ಖಾತೆ ಪ್ರಾರಂಭ ಆಗಿರುವ ಕುರಿತು ತನಿಖೆಗೆ ಸಿದ್ಧ ಅಂತ ಈಶ್ವರಪ್ಪ ಹೇಳಿದ್ರು.
ಅಕ್ರಮದ ಕುರಿತು ತನಿಖೆಗಾಗಿ ಸದನ ಸಮಿತಿ ಮಾಡುವಂತೆ ಬಿಜೆಪಿ ಸದಸ್ಯರಾದ ರವಿಕುಮಾರ್, ಆಯನೂರು ಮಂಜುನಾಥ್ ಆಗ್ರಹಿಸಿದ್ರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ವಿಭಾಗಗಳಿಗೆ ಬಿಡುಗಡೆಯಾದ ಹಣ ಅಕ್ರಮವಾಗಿ ಠೇವಣಿಯಾದ ಕುರಿತು ತನಿಖೆಗೆ ಸದನ ಸಮಿತಿ ರಚನೆ ಮಾಡೋದಾಗಿ ಘೋಷಿಸಿದರು.
ಒಂದು ವಾರ ಕರ್ನಾಟಕ ಬಂದ್​: ಏನು ಇರುತ್ತೆ, ಏನಿರಲ್ಲ ಇಲ್ಲಿದೆ ಮಾಹಿತಿ..

ಎಲ್ಲ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ 28ರ ತನಕ ರಜೆ ಘೋಷಿಸಿದ ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
