ಬೆಂಗಳೂರು:‘ಕರ್ನಾಟಕ ವೈದ್ಯಕೀಯ ಪದವಿ ಪೂರೈಸಿದ ಅಭ್ಯರ್ಥಿಗಳಿಂದ ಕಡ್ಡಾಯ ಸೇವೆ ಕಾಯ್ದೆ- 2012’ ಅನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವೈದ್ಯಕೀಯ ಪದವಿ ಪೂರೈಸಿದ ಅಭ್ಯರ್ಥಿಗಳಿಗೆ 1 ವರ್ಷದ ಸರ್ಕಾರಿ ಮತ್ತು ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ಕಾಯ್ದೆ ಪ್ರಶ್ನಿಸಿ ಡಾ. ಶರಣ್ಯಾ ಮೋಹನ್ ಸೇರಿ 44 ಮಂದಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ವಾದ ಆಲಿಸಿದ ಪೀಠ ಪ್ರತಿವಾದಿಗಳಾದ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್​ಜಿಯುಎಚ್​ಎಸ್) ಹಾಗೂ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ (ಎನ್​ಎಂಸಿ) ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏ. 21ಕ್ಕೆ ಮುಂದೂಡಿತು.
ಆಕ್ಷೇಪವೇನು?:ರಾಜ್ಯ ಸರ್ಕಾರ ಕಡ್ಡಾಯ ಸೇವೆ ಕಾಯ್ದೆಯನ್ನು 2012ರಲ್ಲಿ ಜಾರಿ ಮಾಡಿದ್ದು, 2019ರ ಆಗಸ್ಟ್​ನಲ್ಲಿ ಕಾಯ್ದೆಯ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕೇಂದ್ರ ಸರ್ಕಾರ 2019ರ ಸೆಪ್ಟೆಂಬರ್​ನಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್​ಎಂಸಿ) ರಚಿಸಿದೆ. ವೈದ್ಯಕೀಯ ಕೋರ್ಸ್​ಗಳ ಪ್ರವೇಶಾತಿಗೆ ಸಂಬಂಧಿಸಿದ ಎಲ್ಲ ಅಧಿಕಾರ ಎನ್​ಎಂಸಿಗೆ ಸೇರಿದ್ದು, ಈ ವಿಚಾರದಲ್ಲಿ ರಾಜ್ಯ ಸರ್ಕಾರಗಳಿಗೆ ಯಾವುದೇ ಅಧಿಕಾರವಿಲ್ಲ. ಹೀಗಿದ್ದರೂ, 2021ರ ಫೆ.21ರಂದು ಸುತ್ತೋಲೆ ಹೊರಡಿಸಿರುವ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಕಡ್ಡಾಯ ಸೇವೆ ಪೂರ್ಣಗೊಳಿಸುವವರೆಗೆ ಪ್ರಮಾಣಪತ್ರ ವಿತರಿಸದಂತೆ, ಮೂಲ ದಾಖಲೆಗಳನ್ನು ಹಿಂದಿರುಗಿಸದಂತೆ ಕಾಲೇಜುಗಳಿಗೆ ಸೂಚಿಸಿದೆ. ಮೂಲ ದಾಖಲೆಗಳಿಲ್ಲದೆ ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್​ಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಅನೇಕ ರಾಜ್ಯಗಳಲ್ಲಿ ಕಡ್ಡಾಯ ಸೇವೆ ಎಂಬುದೇ ಇಲ್ಲ. ಕಡ್ಡಾಯ ಸೇವೆಗೆ ಒತ್ತಾಯಿಸುವುದು ಶಿಕ್ಷಣ ಮುಂದುವರಿಸುವವರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + six =
Remember me
