
ಬೆಂಗಳೂರು:ಬರ ಪರಿಹಾರವಾಗಿ ರೈತರ ಖಾತೆಗೆ ತಲಾ 2 ಸಾವಿರ ರೂ ಹಾಕುತ್ತೇವೆ ಎಂದು ಹೇಳಿಕೊಂಡು ಪ್ರಚಾರ ಪಡೆದ ಸರ್ಕಾರ ಇನ್ನೂ ಅವರ ಖಾತೆಗೆ ಹಣ ಜಮೆ ಮಾಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜ.29 ರಂದು ಪ್ರತಿಭಟನೆ ನಡೆಸಲಾಗುವುದು ಎಂದರು.ದಾಖಲೆ ಬಜೆಟ್‌ಗಳನ್ನು ಮಂಡನೆ ಮಾಡಿದೆ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ ಜನರಿಗೆ ಟೋಪಿ ಹಾಕುವುದು ಹೇಗೆಂದು ಕಲಿತಿದ್ದಾರೆ. ಆದ್ದರಿಂದ ಇವರನ್ನು ಟೋಪಿ ಸಿದ್ದರಾಮಯ್ಯರೆಂದು ಕರೆಯಬಹುದು ಎಂದು ವಾಗ್ದಾಳಿ ನಡೆಸಿದರು.ಹೋಪ್‌ಲೆಸ್, ಹೆಲ್ಪ್‌ಲೆಸ್ ಸರ್ಕಾರದಿಂದ ಯಾವ ನಿರೀಕ್ಷೆಯನ್ನು ಇಟ್ಟುಕೊಳ್ಳುವಂತಿಲ್ಲ. ರೈತರು ಕಣ್ಣೀರು ಹಾಕುತ್ತಿರುವಾಗ ಮುಲ್ಲಾಗಳಿಗೆ 10 ಸಾವಿರ ಕೋಟಿ ರೂ. ನೀಡುತ್ತೇನೆಂದು ಹೇಳಿ ಕೂಡಲೆ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದರು. ಆದರೆ ರೈತರಿಗೆ 105 ಕೋಟಿ ರೂ.ಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ ಎಂದರು.
ದೊಡ್ಡಬಳ್ಳಾಪುರದಲ್ಲೂ ಪ್ರತಿಭಟನೆಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್‌ಪ್ಲೆಸ್ ನೀರು, ವಿದ್ಯುತ್ ನೀಡಲಾಗುತಿತ್ತು. ರೈತರಿಗೆ ಏಳು ಗಂಟೆ ವಿದ್ಯುತ್ ಎಂದು ಹೇಳಿ ಮೂರು ಗಂಟೆ ನೀಡುತ್ತಿದ್ದಾರೆ. ವಿದ್ಯುತ್ ಕಡಿತ, ಕಾಮಗಾರಿ ಸ್ಥಗಿತ ವಿರುದ್ಧ ಜ.30 ರಂದು ದೊಡ್ಡಬಳ್ಳಾಪುರದಲ್ಲಿ ಪ್ರತಿಭಟಿಸಲಾಗುವುದು ಎಂದು ಹೆಳಿದರು.
ಕಾಫಿ ಬೆಳೆಗಾರರಿಗೆ ಸ್ಪಂದಿಸಿಲ್ಲಕಾಫಿ ಬೆಳೆಗಾರರಿಗೆ ಗುತ್ತಿಗೆ ಜಮೀನು ನೀಡಿದ್ದು, ಜಿಲ್ಲಾಧಿಕಾರಿಗಳು ರೈತರಿಗೆ ನೆರವಾಗುತ್ತಿಲ್ಲ. ಇದರ ವಿರುದ್ಧವೂ ಕಾಫಿ ಬೆಳೆಗಾರರಿಂದ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇನೆ. ಪ್ರತಿ ಜಿಲ್ಲೆಗಳಲ್ಲಿ ನಾನು ಹಾಗೂ ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಭಟಿಸಲಿದ್ದೇವೆ ಎಂದರು.
ಎಲ್ಲರೂ ಸಂಪುಟ ದರ್ಜೆಈಗ ಸರ್ಕಾರದಲ್ಲಿ ಹೆಣ ಹೊರುವುದಕ್ಕೂ ಹಣ ಇಲ್ಲ ಎನ್ನು ವಸ್ಥಿತಿ ಈ ಸರ್ಕಾರದಲ್ಲಿದೆ. ಎಲ್ಲರಿಗೂ ಸಂಪುಟ ದರ್ಜೆಯ ಸ್ಥಾನ ನೀಡಲಾಗಿದೆ. ವೈದ್ಯ ಸಲಹೆಗಾರರು, ಆರ್ಥಿಕ ಸಲಹೆಗಾರರನ್ನು ನೇಮಿಸಿ ಉಡಾಫೆಯಾಗಿ ಹಣ ಖರ್ಚು ಮಾಡುತ್ತಿದ್ದಾರೆ. ದುಂದುವೆಚ್ಚ ಮಾಡಲು, ಮಜಾ ಮಾಡಲು ಹಣ ಇದ್ದರೂ ರೈತರಿಗೆ ಕೊಡಲು ಹಣ ಇಲ್ಲದ ಸ್ಥಿತಿ ಇದೆ ಎಂದು ದೂರಿದರು.
ಆರ್ಥಿಕ ಶಿಸ್ತು ಇಲ್ಲವಿತ್ತೀಯ ಶಿಸ್ತನ್ನು ಯಾವತ್ತೂ ರಾಜ್ಯ ಸರ್ಕಾರಗಳು ದಾಟಿರಲಿಲ್ಲ. ಈಗ ಎಲ್ಲವೂ ತದ್ವಿರುದ್ದವಾಗಿದೆ. ವೈದ್ಯರು, ಅಂಗನವಾಡಿ ನೌಕರರಿಗೆ ನೀಡಲು ಹಣವಿಲ್ಲ, ಕಾಮಗಾರಿಗಳು ಸ್ಥಗಿತವಾಗಿದೆ. ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಯುವನಿಧಿ ಜಾರಿಗೆ ಎಂಟು ತಿಂಗಳಾಯಿತು. ಅದರಲ್ಲೂ ಒಂದು ವರ್ಷದ ಪದವೀಧರರಿಗೆ ಮಾತ್ರ ಅನ್ವಯವಾಗುತ್ತದೆ. ಇದರಲ್ಲೂ ಭಾರಿ ಮೋಸ ನಡೆದಿದೆ. ವಿದ್ಯುತ್ ಎಲ್ಲರಿಗೂ ಫ್ರೀ ಎಂದು ಯಾರಿಗೂ ಕೊಡಲಿಲ್ಲ ಎಂದರು.
ಮೋದಿ ನೈಜ ಗ್ಯಾರಂಟಿಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಕಟ್ಟಿಸಿದರು, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದರು, ರೈತರಿಗೆ ಪ್ರತಿ ವರ್ಷ ಕಿಸಾನ್ ಸಮ್ಮಾನ್ ನೀಡುತ್ತಿದ್ದಾರೆ. ನೈಜ ಗ್ಯಾರಂಟಿ ಅಂದರೆ ಮೋದಿ ಮಾತ್ರ ಎಂದರು.
ಕರಸೇವೆಗೆ ಬಂದಿರಲಿಲ್ಲರಾಮನಗರದಲ್ಲಿ ಈವರೆಗೆ ಮಂದಿರ ಕಟ್ಟಿಸದವರು ಈಗ ಕಟ್ಟಿಸಲು ಮುಂದಾಗಿದ್ದಾರೆ. ಇಡೀ ದೇಶ ರಾಮ ಎನ್ನುವಾಗ ಮಂದಿರ ಕಟ್ಟಿಸಲು ಹೋಗುತ್ತಾರೆ. ಮಂದಿರ ನಿರ್ಮಾಣಕ್ಕಾಗಿ ಬಿಜೆಪಿ ಕರಸೇವೆ ಮಾಡಿದೆ. ಕಾಂಗ್ರೆಸ್‌ನ ಮನೆಯಿಂದ ಒಬ್ಬರೂ ಬಂದಿಲ್ಲ ಎಂದು ಹೇಳಿದರು.
ಕಾಲಿಟ್ಟ ಕಡೆ ಅಧಿಕಾರಕ್ಕೆ ಕುತ್ತುರಾಹುಲ್ ಗಾಂಧಿ ಭಾರತ್ ಜೋಡೋ ಮಾಡಿದ ಮೇಲೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಮೂರು ರಾಜ್ಯಗಳು ಹೋಯಿತು. ಈಗ ಯಾತ್ರೆ ಮಾಡಿದಾಗ ನಿತೀಶ್ ಕುಮಾರ್ ಕಾಂಗ್ರೆಸ್ ಚೋಡೋ ಎಂದಿದ್ದಾರೆ. ಆಮ್ ಆದ್ಮಿ ಪಕ್ಷದವರೂ ಅದನ್ನು ಹೇಳಿದ್ದಾರೆ. ಇವರು ಕಾಲಿಟ್ಟಲೆಲ್ಲ ಸರ್ಕಾರ ಬೀಳುತ್ತದೆ ಎಂದರು.
ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದು ಕಾಂಗ್ರೆಸ್ ಸಚಿವರೇ ಸಹಿ ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಆಗಲೇ ರಾಜೀನಾಮೆ ನೀಡಬೇಕಿತ್ತು. ಇನ್ನು ವರದಿ ಜಾರಿ ಮಾಡಿದರೆ ಅದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಹನುಮ ಧ್ವಜ ಹಾರಿಸಲು ಆಗ್ರಹ:ಮಂಡ್ಯದಲ್ಲಿ ಹನುಮ ಧ್ವಜವನ್ನು ಕಾಂಗ್ರೆಸ್‌ನವರು ಧ್ವಂಸ ಮಾಡಿದ್ದಾರೆ. ಏಕಾಏಕಿ ಪೊಲೀಸರನ್ನು ಕರೆಸಿ ಧ್ವಜ ಏಕೆ ತೆಗೆಸಬೇಕಿತ್ತು? ಇದು ಕಾಂಗ್ರೆಸ್‌ಗೆ ರಾಮನ ಬಗ್ಗೆ ಇರುವ ದ್ವೇಷವಾಗಿದೆ. ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಕುಕ್ಕರ್ ಬಾಂಬ್ ತಂದವನನ್ನು ಬ್ರದರ್ಸ್ ಎಂದು ಹೇಳುತ್ತಾರೆ. ಇದರ ವಿರುದ್ಧ ಹೋರಾಟ ಮಾಡಲಿದ್ದೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + sixteen =
Remember me
