ಬೆಂಗಳೂರು:ಸಮಾಜವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕ ವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಗುರುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ವಾಗಿದೆ ಎಂದರು.
10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅವರು ಗದ್ಗದಿತರಾದರು.
ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.
ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಹೀಗೆಯೇ ಹತ್ಯೆಯಾದ ಹರ್ಷನ ಕುಟುಂಬಕ್ಕೂ ಸಚಿವರು ಮಾನವೀಯವಾಗಿ ಸ್ಪಂದಿಸಿದ್ದರು.
ಪ್ರವೀಣ್​ ಹತ್ಯೆ: ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯದಂಗಡಿ ಕ್ಲೋಸ್​- ಕುಟುಂಬಸ್ಥರ ಭೇಟಿಯಾಗಲಿರುವ ಸಿಎಂ

ಬಿಜೆಪಿ ಮುಖಂಡ ಪ್ರವೀಣ್​ ಹತ್ಯೆಗೆ ಇದೆಯೆ ಹಲಾಲ್ ನಂಟು? ಕೃತ್ಯಕ್ಕೂ ಮುನ್ನ ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
