ಬೆಂಗಳೂರು:ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ 10 ಸಾವಿರ ರೂಪಾಯಿಗಳ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಈ ಹಿಂದಿನ‌ ರೀತಿಯೇ ಪರಿಹಾರವನ್ನು ವಿತರಿಸುವಂತೆ ಅವರು ಸೂಚನೆ ನೀಡಿದ್ದಾರೆ.
ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂಪಾಯಿಗ ಜತೆ, ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂಪಾಯಿ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
In the backdrop of rising rainfall across the state, Karnataka Chief Minister has instructed the authorities to provide relief of Rs 10,000 to the families which are affected due to rain & Rs 5 lakh compensation if the entire house is damaged due to rain: Chief Minister's Officepic.twitter.com/pUAqRMF3Gx
— ANI (@ANI)August 6, 2020

ಇದರ ಜತೆಗೆ, ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕರೊನಾ ವೈರಸ್‌ ಚಿಕಿತ್ಸಾ ಕೇಂದ್ರಗಳಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವುದರಿಂದ ಗ್ರಾಮಗಳಲ್ಲಿರುವ ಶಾಲಾ ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರವಾಗಿ ಮಾರ್ಪಡಿಸಿ ಅಗತ್ಯ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕಲ್ಲದೆ, ಪ್ರತಿದಿನ‌ ಒಟ್ಟು ಹಾನಿಯ ಬಗ್ಗೆಯೂ ವರದಿ ಕೊಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.
ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಹುಬ್ಬಳ್ಳಿ: ಮದುವೆಮನೆಯಿಂದ ಆಸ್ಪತ್ರೆಗೆ ರೌಡಿಷೀಟರ್‌!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + nine =
Remember me
