ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಶರಣರನ್ನು ಗುರುವಾರ ರಾತ್ರಿ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಎಫ್‌ಐಆರ್ ದಾಖಲಾಗಿ ಆರು ದಿನಗಳ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಮಠಕ್ಕೆ ತೆರಳಿ ಸ್ವಾಮೀಜಿ ಅವರನ್ನು ಬಂಧಿಸಿ ಬಿಗಿ ಭದ್ರತೆಯಲ್ಲಿ ಕರೆದೊಯ್ದಿದ್ದರು.
ಇದೀಗ ಶ್ರೀಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ‘ಶ್ರೀಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ಬಳಿಕ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದೆವು. ನ್ಯಾಯಾಧೀಶರು ಶ್ರೀಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಿ ಆದೇಶಿಸಿದ್ದಾರೆ’ ಎಂದು ಚಿತ್ರದುರ್ಗ ಎಸ್ ಪಿ ಪರಶುರಾಮ್ ತಿಳಿಸಿದ್ದಾರೆ.
ಮುರುಘಾ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತೇವೆ. ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವ ಮುನ್ನ ಚಳ್ಳಕೆರೆ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆಗೊಳಪಡಿಸಿದ್ದೇವೆ‌. ಮುರುಘಾ ಶರಣರು ವಿಚಾರಣೆಗೆ ಸಹಕರಿಸಿದ್ದಾರೆ. ತಲೆಮರೆಸಿಕೊಂಡಿರುವ ಇನ್ನು ಮೂವರ ಬಂಧನಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಶ್ರೀಗಳ ಬಂಧನದ ಬಳಿಕ ಉಳಿದ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮೊದಲನೇ ಆರೋಪಿ ಮುರುಘಾ ಶರಣರಾದರೆ ಎರಡನೇ ಆರೋಪಿ ಹಾಸ್ಟೆಲ್ ವಾರ್ಡನ್ ರಶ್ಮಿ. ರಶ್ಮಿ ಅವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಮೂರನೇ ಆರೋಪಿ ಬಸವಾದಿತ್ಯ ದೇವರು, ನಾಲ್ಕನೇ ಆರೋಪಿ ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಐದನೇ ಆರೋಪಿ ಗಂಗಾಧರಯ್ಯ. ಇವೆಲ್ಲಾ ತಲೆಮರೆಸಿಕೊಂಡಿದ್ದಾರೆ.
ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಮುರುಘಾ ಮಠದ ಬಳಿ ಪೊಲೀಸ್ ಭದ್ರತೆ ಮಾಡಲಾಗಿದೆ. ಮಠದ ಆವರಣದೊಳಗಡೆ ಯಾರನ್ನೂ ಬಿಡದೇ ಗೇಟ್ ಮುಚ್ಚಲಾಗಿದ್ದು, ಮಠದ ಸಿಬ್ಬಂದಿಗೆ ಮಾತ್ರ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಮಠದ ಬಳಿ ಭಕ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮಠದ ಬಳಿ ಒಂದು ಕೆಎಸ್ಆರ್​ಪಿ ಹಾಗೂ ಡಿಎಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಬಸವರಾಜನ್ ದಂಪತಿಗೆ ಷರತ್ತುಬದ್ಧ ಜಾಮೀನು: ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಎಸ್​ಕೆಬಿ ಔಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + fifteen =
Remember me
