ಮಡಿಕೇರಿ:ಸದ್ಯ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ ಎಬ್ಬಿರುವ ನಡುವೆಯೇ ಮೊಟ್ಟೆಯ ವಿಷಯವೂ ಕಾವೇರುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಳೆಹಾನಿ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಕಪ್ಪು ಬಾವುಟ ಪ್ರದರ್ಶನ ಹಾಗೂ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಇದೀಗ ರಾಜಕೀಯ ಪಕ್ಷಗಳ ಕೆಸರೆರೆಚಾಟಕ್ಕೆ ಕಾರಣವಾಗಿದೆ.
ಇದರ ನಡುವೆಯೇ ಕಾಂಗ್ರೆಸ್ ನಾಯಕರು ಇದೇ 26ರಂದು ಮಡಿಕೇರಿ ಚಲೋ ಹಮ್ಮಿಕೊಂಡಿದ್ದಾರೆ. ಜಿಲ್ಲಾ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಅದೇ ಇನ್ನೊಂದೆಡೆ, ಅದೇ ದಿನ ಬೆಇಪಿಯಿಂದ ಜಾಗೃತಿ ಸಮಾವೇಶವೂ ನಡೆಯಲಿದೆ.
ಆದರೆ ಇದೀಗ ಕಾಂಗ್ರೆಸ್​ನವರಿಗೆ ಶಾಕ್​ ನೀಡುವ ಆದೇಶವೊಂದನ್ನು ಮಡಿಕೇರಿ ಜಿಲ್ಲಾಡಳಿತ ಮಾಡಿದೆ. ಅದೇನೆಂದರೆ, ಕೊಡಲು ಜಿಲ್ಲೆಯಾದ್ಯಂತ ಆಗಸ್ಟ್ 24 ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27 ಸಾಯಂಕಾಲ 6 ಗಂಟೆಯವರೆಗೆ ಸೆಕ್ಷನ್ 144 ಹೇರಲಾಗಿದೆ. ಅಂದರೆ ಇಷ್ಟೂ ದಿನಗಳು ನಿಷೇಧಾಜ್ಞೆ ಜಾರಿಯಲ್ಲಿ ಇರಲಿವೆ. ಮಾತ್ರವಲ್ಲದೇ ಈ ದಿನ ಮದ್ಯ ಮಾರಾಟವನ್ನು ಕೂಡ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ನಾಲ್ಕು ದಿನ ನಿಷೇಧಾಜ್ಞೆ! ಕಾಂಗ್ರೆಸ್ ಮತ್ತು ಬಿಜೆಪಿಯ ರ್ಯಾಲಿ ಹಿನ್ನಲೆಯಲ್ಲಿ' ಮುಂಜಾಗ್ರತಾ ಕ್ರಮವಾಗಿ ಆದೇಶ ಹೊರಡಿಸಿದ ಡಿಸಿ!@MysuruMemes@INCKarnataka@BJP4Karnataka@mepratap@siddaramaiah@BSBommai@DKShivakumar@ramadassmysuru@Mysuru_district@MysuruCity_pic.twitter.com/YvOqAtI5Jt
— Nannuru mysuru (@MysuruNannuru)August 23, 2022

ಈ ಕುರಿತು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ. ಯಾವುದೇ ಸಭೆ, ಸಮಾರಂಭವನ್ನು ಆಯೋಜನೆ ಮಾಡುವಂತಿಲ್ಲ. ಐದು ಜನಕ್ಕಿಂತ ಹೆಚ್ಚು ಜನರು ಭಾಗವಹಿಸುವಂತಿಲ್ಲ. ಜನರು ಗುಂಪು ಸೇರುವಂತಿಲ್ಲ. ನಿಷೇಧಾಜ್ಞೆ ಜಾರಿಯಲ್ಲಿರುವ 4 ದಿನ ಯಾವುದೇ ಸಭೆ, ಸಮಾರಂಭ, ಮೆರವಣಿಗೆ, ಪ್ರತಿಭಟನೆ ಹಾಗೂ ಯಾವುದೇ ರ್ಯಾಲಿ ನಡೆಸುವಂತಿಲ್ಲ. ಸರ್ಕಾರದ ಆದೇಶವನ್ನು ಧಿಕ್ಕರಿಸಿ ಕಾರ್ಯಕ್ರಮ ನಡೆದರೆ ಬಂಧನವಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದರೆ ಪೂರ್ವನಿಯೋಜಿತ ಸರ್ಕಾರಿ, ಖಾಸಗಿ ಕಾರ್ಯಕ್ರಮಕ್ಕೆ ಅಡ್ಡಿಯಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ 4 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸುವ ಜಿಲ್ಲಾಧಿಕಾರಿ ಆದೇಶವನ್ನು ನಾನು ಒಪ್ಪುವುದಿಲ್ಲ ಎಂದು ಮಡಿಕೇರಿ ಶಾಸಕ, ಬಿಜೆಪಿಯ ಅಪ್ಪಚ್ಚು ರಂಜನ್ ಹೇಳಿದರು. ‘ಸರ್ಕಾರ ಯಾಕೆ ಹೀಗೆ ಮಾಡಿತೋ ಗೊತ್ತಿಲ್ಲ. ನಾವು ಎಲ್ಲದಕ್ಕೂ ರೆಡಿ ಇದ್ದೆವು. ನಿಷೇಧಾಜ್ಞೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡುತ್ತೇವೆ. ಸರ್ಕಾರ ನಮ್ಮದೇ ಇದೆ, ಹಾಗಾಗಿ ಸಿಎಂ ಬಳಿ ಮಾತಾಡುತ್ತೇನೆ. ನಮಗೆ ಕೊಡಗಿನಲ್ಲಿ ಅಪಾರ ಜನ ಬೆಂಬಲ ವ್ಯಕ್ತವಾಗಿದೆ’ ಎಂದು ಹೇಳಿದರು.
#KodaguDC orders closure of all liquor shops in district on August 25, 26 in view political rallies organised by Congress, BJP#Savarkar#Siddaramaiah#TipuSultan@INCKarnataka@BJP4Karnataka@DCKodagu@XpressBengaluru@KodaguSppic.twitter.com/mM4ILKYHh9
— vincent dsouza (@vinndz_TNIE)August 22, 2022

ಜಿಲ್ಲಾಧಿಕಾರಿಗಳು ವಿಧಿಸಿರುವ ನಿಷೇಧಾಜ್ಞೆಯನ್ನು ಎಲ್ಲರೂ ಪಾಲಿಸಬೇಕಾಗುತ್ತದೆ ಎಂದು ವಿರಾಜಪೇಟೆ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ನಾವು ಸರ್ಕಾರದ ಭಾಗವಾದ್ದರಿಂದ ಈ ಆದೇಶಕ್ಕೆ ಮನ್ನಣೆ ನೀಡುತ್ತೇವೆ. ಆದರೆ ನಮ್ಮ ಜನಜಾಗೃತಿ ಕೆಲಸ‌ ಮುಂದುವರಿಯಲಿದೆ. ನಾವು 5 ತಂಡಗಳಾಗಿ ಜಿಲ್ಲೆಯ ಉದ್ದಗಲಕ್ಕೂ ಸಂಚರಿಸಿ, ಕರಪತ್ರ ಹಂಚಿ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದರು.(ದಿಗ್ವಿಜಯ ನ್ಯೂಸ್​)
ಮೊಹಮ್ಮದ್​ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಶಾಸಕ ರಾಜಾ ಸಿಂಗ್​ ಅರೆಸ್ಟ್​

ಕೈಗೆ ಬಂದ ತುತ್ತು ಬಾಯಿಗಿಲ್ಲ: ಸರ್ಕಾರಿ ಕೆಲಸ ಸಿಕ್ಕಿಲ್ಲ.. ಬ್ಲಡಿ ಸಿಸ್ಟಮ್​ ಎಂದು ಬರೆದಿಟ್ಟು ಬಾರದ ಲೋಕಕ್ಕೆ ಯುವತಿ…

ಕೆಪಿಟಿಸಿಎಲ್​ ಪರೀಕ್ಷೆ ಗೋಲ್​ಮಾಲ್​: ಸ್ಮಾರ್ಟ್​ವಾಚ್​, ಬ್ಲೂಟೂಥ್​ನಿಂದ ಅಕ್ರಮ- 9 ಮಂದಿ ಅರೆಸ್ಟ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − 8 =
Remember me
