ಬೆಂಗಳೂರು:ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 191 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,854ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಕೋವಿಡ್‌ನಿಂದ ಯಾರೂ ಮೃತಪಟ್ಟಿಲ್ಲ. 138 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, 11,380 ಕೋವಿಡ್ ಟೆಸ್ಟ್ ನಡೆಸಲಾಗಿದೆ.
ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.61ರಷ್ಟಿದ್ದು, ಬೆಂಗಳೂರು ನಗರದಲ್ಲಿ 171 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,763 ಇದೆ. ಮೈಸೂರಲ್ಲಿ 14, ದಕ್ಷಿಣ ಕನ್ನಡದಲ್ಲಿ 2 ಪ್ರಕರಣಗಳು ಕಂಡುಬಂದಿವೆ. ಚಿತ್ರದುರ್ಗ, ತುಮಕೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ.
ಇದುವರೆಗೆ ರಾಜ್ಯದಲ್ಲಿ 39.48 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 40,060 ಮಂದಿ ಮೃತರಾಗಿದ್ದಾರೆ. ಮೇ 5ರಂದು 138 ಜನರು ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 39.06 ಲಕ್ಷಕ್ಕೆ ಏರಿಕೆಯಾಗಿದೆ.



ಪ್ರಿಯತಮೆ ಜತೆ ಮದುವೆಯಾಗುವಾಗ್ಲೇ ಎಂಟ್ರಿ ಕೊಟ್ಟಳೊಬ್ಬ ಮಹಿಳೆ! ವಧು ಜತೆ ತೀರ್ಥಹಳ್ಳಿಯ ವರ ಎಸ್ಕೇಪ್‌
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − five =
Remember me
