ಬೆಂಗಳೂರು:61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಈಗ ಮತ್ತೆ ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.ಬೆಳಗಾವಿ, ಚಿಕ್ಕಮಗಳೂರು, ಕಡೂರು, ತರಿಕೆರೆ, ಸೂಪ, ಬಬಲೇಶ್ವರ, ಕೊಲ್ಹಾರ, ಮುದ್ದೆಬಿಹಾಳ, ಮೂಡಿಗೆರೆ ಹೊಸನಗರಗಳ ಜತೆಗೆ ಇನ್ನೂ ಕೆಲವು ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಘೋಷಿಸಿದ್ದೇವೆ ಎಂದರು.ಬೆಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಅತಿವೃಷ್ಟಿ ತಾಲೂಕಿನಲ್ಲಿ ಪರಿಹಾರೋಪಾಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲೂ 50 ಕ್ಕೂ ಹೆಚ್ಚು ರಸ್ತೆಗಳಲ್ಲಿ ನೀರು ನಿಲ್ಲುತ್ತಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ಚಂಡಮಾರುತದ ಅಬ್ಬರದ ಬಗ್ಗೆಯೂ ಅಲರ್ಟ್ ಕೊಡಲಾಗಿದೆ. ಕರಾವಳಿ ಭಾಗದ 40 ಕಡೆ ಅನುಷ್ಠಾನ ಮಾಡಲಾಗುತ್ತಿದೆ. ಅಲಾರಾಂ ಸಿಸ್ಟಂಗಳನ್ನು ಮಾಡುತ್ತಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಹಣ ಬರಲಿದೆ. ಒಂದೊಂದು ಸಿಸ್ಟಂಗೆ 12 ಕೋಟಿ ಖರ್ಚಾಗುತ್ತದೆ ಎಂದು ಸಚಿವರು ಹೇಳಿದರು. ಈ ಅಲಾರಂ ಆರೇಳು ಕಿಮೀವರೆಗೆ ಇದು ಸೈರನ್ ಮಾಡಲಿದೆ. ಚಂಡಮಾರುತಗಳ ಸುಳಿವನ್ನ ನೀಡಲಿದೆ. ಇದು ಕರಾವಳಿ ಭಾಗದ ಜನರಿಗೆ ಅನುಕೂಲವಾಗಲಿದೆ. ಮೀನುಗಾರರಿಗೆ ಇದು ಹೆಚ್ಚು ಉಪಯೋಗವಾಗಲಿದೆ ಎಂದರು.
‘ಕಚೇರಿ ಸುತ್ತುವರೆದಿದ್ದರು, ಬುರ್ಖಾ ಹಾಕದವರನ್ನು ಕೊಲ್ಲುತ್ತಿದ್ದರು, ಜೀವ ಕೈಯಲ್ಲಿ ಹಿಡಿದು ಓಡಿದೆ…’
ಅಫ್ಘಾನಿಸ್ತಾನದ ಸರ್ಕಾರಿ ನೌಕರರಿಗೆ ಕ್ಷಮಾದಾನ ಕೊಟ್ಟ ತಾಲಿಬಾನಿಗಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 5 =
Remember me
