ಬೆಂಗಳೂರು:ಅತಿವೃಷ್ಟಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ‌ ಹೊರಡಿಸಿದ್ದಾರೆ‌.
ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ ಕೇಂದ್ರ, ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೆ ಒಳಗಾಗಿವೆ.
ಕೆಲ ದಿನಗಳ ಹಿಂದೆ ನಾನು ಕೆಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಆ ಸಂದರ್ಭದಲ್ಲಿ ಈ ಹಾನಿಯನ್ನು ಸ್ವತಃ ವೀಕ್ಷಣೆ ಮಾಡಿದ್ದೇನೆ. ತ್ವರಿತ ಗತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕಾಗಿದೆ. ಇದಕ್ಕಾಗಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ. ಇದಕ್ಕಾಗಿ ಕೂಡಲೇ 500 ಕೋಟಿ ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ‌.
ರಾಜ್ಯದಲ್ಲಿ ಪ್ರವಾಹ ಸ್ಥಿತಿ; ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕೊಟ್ಟರು ಈ ಸೂಚನೆ…

ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಇನ್ಮುಂದೆ ಫೋಟೋ/ವಿಡಿಯೋ ಬ್ಯಾನ್​: ಹೊರಟಿದೆ ಈ ಸುತ್ತೋಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 12 =
Remember me
