ಬೆಂಗಳೂರು:ಕಾರ್ಮಿಕ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕೆ.ಎಸ್.ಆರ್.ಟಿ.ಸಿ. ನಿಗಮದ‌ ಎಲ್ಲಾ ವಿಭಾಗಗಳ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ‌ ಮಾಡಲಾಗಿದೆ. ನಿಗಮದ ಇತಿಹಾಸದಲ್ಲಿಯೇ ಇಂಥದ್ದೊಂದು ಕ್ರಮ ಪ್ರಥಮ ಬಾರಿಗೆ ತೆಗೆದುಕೊಂಡಿರುವುದು ಎನ್ನಲಾಗಿದೆ.
ಹತ್ತು ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ , ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಗೈರುಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯ ಹಾಜರಾಗಿದ್ದಾರೆ.
ನಿಗಮದಲ್ಲಿ ಒಟ್ಟು 35 ಸಾವಿರ ಸಿಬ್ಬಂದಿ ಇದ್ದಾರೆ. ಈ ಪೈಕಿ ಒಟ್ಟು 8.414  ಶಿಸ್ತು ಪ್ರಕರಣಗಳಿವೆ. ಕಳೆದ ಮೂರು ದಿನಗಳಿಂದ 7,200 ಶಿಸ್ತು ಪ್ರಕರಣಗಳನ್ನು 100 ರಿಂದ 500 ರೂಪಾಯಿ ದಂಡದ ಜತೆ ಮುಕ್ತಾಯಗೊಳಿಸಲಾಗಿದೆ. ಇವರ ಮೇಲಿದ್ದ ಪ್ರಕರಣಗಳಿಗೆ ಕನಿಷ್ಠವೆಂದರೆ 25 ಸಾವಿರ ರೂಪಾಯಿ ದಂಡ ವಿಧಿಸಬೇಕಿತ್ತು. ಆದರೆ ಕನಿಷ್ಠ ಮೊತ್ತದ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಮ್ಮ ಸಾರಿಗೆ ಸಂಸ್ಥೆಯ ಬೆನ್ನುಲುಬು ನಮ್ಮ ಕಾರ್ಮಿಕರು. ಅವರ ಕ್ಷೇಮ‌ ಲಾಭವೇ ನಮ್ಮ‌ ಪ್ರಮುಖ ಆದ್ಯತೆಯಾಗಿರಬೇಕು ಎಂದರು. ನಮ್ಮ ಸಂಸ್ಥೆ ನಡೆಯುತ್ತಿರುವುದು ಚಾಲಕ,‌ನಿರ್ವಾಹಕ ,ತಾಂತ್ರಿಕ ಸಿಬ್ಬಂದಿಯೇ ಹೊರತು ವ್ಯವಸ್ಥಾಪಕ ನಿರ್ದೇಶಕರಿಂದಲ್ಲ. ವ್ಯವಸ್ಥಾಪಕ ನಿರ್ದೇಶಕರು ಬಸ್ಸನ್ನು ಚಾಲನೆ ಮಾಡಲು ಸಾಧ್ಯವಿಲ್ಲ. ಅಧಿಕಾರಿ / ನೌಕರರ ಬಾಂಧವ್ಯ ಚೆನ್ನಾಗಿದ್ದರೆ ಮಾತ್ರ ಸಂಸ್ಥೆ ಚೆನ್ನಾಗಿರುತ್ತದೆ. ಆಡಳಿತ ವರ್ಗ ಅಂದರೆ ಶಿಕ್ಷೆ ಕೊಡುವುದು ಮಾತ್ರವಲ್ಲ, ನೌಕರರ ಶ್ರೇಯೋಭಿವೃದ್ದಿಯಾಗಿ ದುಡಿಯುವುದು‌ ಕೂಡ ನಮ್ಮ ಕರ್ತವ್ಯವಾಗಿರಬೇಕು ಎಂದ ಅವರು, ನೌಕರರು ಮತ್ತೊಮ್ಮೆ ಅಪರಾಧ/ ಅಪಘಾತ/ ಗೈರು‌ ಹಾಜರಿ ಪ್ರಕರಣಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆಯನ್ನು ಸಹ ನೀಡಿದರು.
ನಿಗಮದ ಪ್ರತಿದಿನದ  ಸರಾಸರಿ ಆದಾಯ 10 ಕೋಟಿ ಇರಬೇಕು. ಆದರೆ ನಮಗೆ ಸರಾಸರಿ 8 ಕೋಟಿ ಮಾತ್ರ ಬರುತ್ತಿದೆ, ಇದರಲ್ಲಿ 70% ಡೀಸೆಲ್ ಪಾವತಿಗೆ ಸಂದಾಯ ಮಾಡಬೇಕಾಗಿದೆ. ಆದ್ದರಿಂದ ನಿಗಮದ ಆರ್ಥಿಕ ಪರಿಸ್ಥಿತಿಯು ಕ್ಲಿಷ್ಟಕರವಾದ ಸ್ಥಿತಿಯಲ್ಲಿದೆ ಎಂದು ಅನ್ಬುಕುಮಾರ್ ವಿವರಿಸಿದರು.
ತಿರುಪತಿಯಲ್ಲಿ ಅಪ್ಪುವಿಗೆ ಇದೆಂಥ ಅವಮಾನ? ಕನ್ನಡ ಬಾವುಟಕ್ಕೂ ನೋ ಎಂಟ್ರಿ! ಶಿವಣ್ಣ ನೋವು…

‘ನಮ್ಮ ಸಾವಿನ ರಹಸ್ಯ ಈ ಟೇಬಲ್​ ಮೇಲಿದೆ… ಡಾಕ್ಟರ್​ ಕೊಟ್ಟಿರೋ ರಿಪೋರ್ಟ್​ ಇಲ್ಲಿದೆ…’

ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ: ಜೀವ ಕೈಯಲ್ಲಿ ಹಿಡಿದುಕೊಂಡ ಪ್ರಯಾಣಿಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
